ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೊಲೀಸರು ಇಲ್ಲಿ ಪ್ರತಿಭಟನೆ ಮಾಡಬಾರದು ಎಂದು ಹೇಳಿದ್ದಾರೆ. ಇಷ್ಟು ಕೆಟ್ಟ ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ; ಆಡಳಿತ ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿದೆ ಎಂದು ಟೀಕಿಸಿದರು.
ಡಿಕೆ ಶಿವಕುಮಾರ್ ರಾಜ್ಯದ ಆಡಳಿತವೇ ಬೇಡ ಎಂಬಂತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಇಳಿಸಿ ಹೊಸ ಸಿಎಂ ಮಾಡಲು ಪ್ರಯತ್ನದಲ್ಲಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೊಂಡು ಸರ್ಕಾರ ಕೆಲಸ ಮಾಡ್ತಿಲ್ಲ. ಪರಮೇಶ್ವರ್, ಯಾವಾಗ ಎಚ್ಚೆತ್ತುಕೊಳ್ತಾರೋ ಅಲ್ಲಿ ವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಇಂದು ಬೆಳಗಾವಿಗೆ ಮಹಿಳಾ ಸಂಸದರ ನಿಯೋಗ ಕೂಡ ಭೇಟಿ ಕೊಟ್ಟಿದೆ. ನಾವು ಈಗಾಗಲೇ ಇದನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ. ಸೋಮವಾರ ನಡೆಯಲಿರುವ ಸಂಸತ್ ಅಧಿವೇಶನದಲ್ಲೂ ಇದನ್ನು ಪ್ರಸ್ತಾಪಿಸುತ್ತೇವೆ ಎಂದು ತಿಳಿಸಿದರು.
ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಲಾಯಿತು. ಇದೇವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಬಿಡದೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.