ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅಪಹಾಸ್ಯ ಮಾಡಿದ ಘಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ.
ಟ್ವಿಟ್ ಮಾಡಿರುವ ರಾಷ್ಟ್ರಪತಿ, ‘‘ಸಂಸತ್ ಆವರಣದಲ್ಲಿ ನಮ್ಮ ಗೌರವಾನ್ವಿತ ಉಪ ರಾಷ್ಟ್ರಪತಿಯನ್ನು ಅವಮಾನಿಸಿದ ರೀತಿ ಕಂಡು ಬೇಸರವಾಯಿತು. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರಾಗಿರಬೇಕು, ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡದಲ್ಲಿರಬೇಕು. ಸಂಸದೀಯ ಸಂಪ್ರದಾಯದ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ” ಎಂದಿದ್ದಾರೆ.
ಸೆರಾಂಪೋರ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ನಿನ್ನೆ ಸಂಸತ್ತಿನ ಹೊರಗೆ ರಾಜ್ಯಸಭಾಧ್ಯಕ್ಷರನ್ನು ಮಿಮಿಕ್ರಿ ಮಾಡುತ್ತಿರುವ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಚಿತ್ರೀಕರಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇತ್ತೀಚೆಗಷ್ಟೇ ಭದ್ರತಾ ಲೋಪದಿಂದ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಹಲವರನ್ನು ಅಮಾನತುಗೊಳಿಸಿದ ನಂತರ ಸಂಸದರು ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ ವೇಳೆ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರೂ ಉಪ ರಾಷ್ಟ್ರಪತಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ಬಗ್ಗೆ ಸ್ವತಃ ಧನಖರ್ ಅವರು ಟ್ವಿಟ್ ಮಾಡಿದ್ದು, “ಪ್ರಧಾನಮಂತ್ರಿಯವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ನಿನ್ನೆ ಪವಿತ್ರ ಸಂಸತ್ತಿನ ಸಂಕೀರ್ಣದಲ್ಲಿ ಕೆಲವು ಗೌರವಾನ್ವಿತ ಸಂಸದರ ಹೀನಾಯ ನಾಟಕಗಳ ಬಗ್ಗೆ ಅವರು ತೀವ್ರ ನೋವು ವ್ಯಕ್ತಪಡಿಸಿದರು. ನಾನು 20 ವರ್ಷಗಳಿಂದ ಇಂತಹ ಅವಮಾನಗಳನ್ನು ಎದುರಿಸುತ್ತಲೇ ಇದ್ದಾರೆ. ಆದರೆ ಭಾರತದ ಉಪರಾಷ್ಟ್ರಪತಿಯಂತಹ ಸಾಂವಿಧಾನಿಕ ಕಚೇರಿಗೆ ಮತ್ತು ಸಂಸತ್ತಿನಲ್ಲೂ ಇದು ಸಂಭವಿಸಬಹುದು ಎಂಬುದು ದುರದೃಷ್ಟಕರ ಎಂದು ಅವರು ಹೇಳಿದರು. ಅದಕ್ಕೆ ನಾನು ಪ್ರಧಾನ ಮಂತ್ರಿಯವರೇ, ಕೆಲವರ ವರ್ತನೆಗಳು ನನ್ನ ಕರ್ತವ್ಯವನ್ನು ನಿರ್ವಹಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಎತ್ತಿಹಿಡಿಯುವುದನ್ನು ತಡೆಯುವುದಿಲ್ಲ. ನನ್ನ ಹೃದಯದ ಆಳದಿಂದ ಆ ಮೌಲ್ಯಗಳಿಗೆ ನಾನು ಬದ್ಧನಾಗಿದ್ದೇನೆ. ಯಾವುದೇ ಅವಮಾನಗಳು ನನ್ನ ಹಾದಿಯನ್ನು ಬದಲಾಯಿಸುವುದಿಲ್ಲ ಎಂದು ಹೇಳಿದೆ” ಎಂದಿದ್ದಾರೆ.
Received a telephone call from the Prime Minister, Shri @narendramodi Ji. He expressed great pain over the abject theatrics of some Honourable MPs and that too in the sacred Parliament complex yesterday. He told me that he has been at the receiving end of such insults for twenty…
— Vice President of India (@VPIndia) December 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.