ನವದೆಹಲಿ: ತೃಣಮೂಲ ಸಂಸದರೊಬ್ಬರು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಮಿಮಿಕ್ರಿ ಮಾಡಿ ಅವಮಾನಿಸಿದ ಘಟನೆಗೆ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿವೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ರಾಜ್ಯಸಭಾ ಸಂಸದರು ಉಪರಾಷ್ಟ್ರಪತಿಗೆ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಈ ಬಗ್ಗೆ ಮಾಹಿತಿ ನೀಡಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷರಾದ ಧಂಖರ್ ಅವರಿಗೆ ಬೆಂಬಲ ವ್ಯಕ್ತಪಡಿಸಲು ಎನ್ಡಿಎ ಸದಸ್ಯರು ಸದನದಲ್ಲಿ ಒಂದು ಗಂಟೆಗಳ ಕಾಲ ನಿಲ್ಲುತ್ತಾರೆ ಎಂದು ಹೇಳಿದ್ದಾರೆ.
“ನಾವು ಘಟನೆಯನ್ನು ಬಲವಾಗಿ ಖಂಡಿಸುತ್ತೇವೆ. ಎಲ್ಲ ಮಿತಿಗಳನ್ನು ಅವರು ಮೀರುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಗಳಲ್ಲಿನ ಜನರನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ. ಅವರು 20 ವರ್ಷಗಳಿಂದ ಪ್ರಧಾನಿ ಮತ್ತು ಒಬಿಸಿ ಸಮುದಾಯವನ್ನು ಅವಮಾನಿಸುತ್ತಿದ್ದಾರೆ, ಅವರು ರಾಷ್ಟ್ರಪತಿಯನ್ನು ಅವಮಾನಿಸಿದ್ದಾರೆ. ಮೊದಲ ಬಾರಿಗೆ ಜಾಟ್ ಸಮುದಾಯದ ಒಬ್ಬರು ಉಪರಾಷ್ಟ್ರಪತಿಯಾದರು, ಅವರಿಗೂ ಅವಮಾನ ಮಾಡಿದ್ದಾರೆ. ಉಪರಾಷ್ಟ್ರಪತಿ ಮತ್ತು ಮುಖ್ಯಮಂತ್ರಿಗಳ ಅವಮಾನವನ್ನು ನಾವು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ” ಎಂದು ಜೋಶಿ ಹೇಳಿದ್ದಾರೆ.
“ಹೀಗಾಗಿ ಉಪ ರಾಷ್ಟ್ರಪತಿಗಳ ಗೌರವಾರ್ಥವಾಗಿ ಮತ್ತು ಅಪಹಾಸ್ಯದ ವಿರುದ್ಧ ಪ್ರತಿಭಟಿಸಲು ನಾವು ಪ್ರಶ್ನೋತ್ತರ ಅವಧಿಯಲ್ಲಿ ನಿಂತು ಭಾಗವಹಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.