ನವದೆಹಲಿ: ಭಾರತೀಯ ಪ್ರಜೆಯೊಬ್ಬ ಅಮೆರಿಕ-ಕೆನಡಾ ಪ್ರಜೆ ಖಲಿಸ್ತಾನಿ ಭಯೋತ್ಪಾದಕ ಗುರುಪಂತ್ ಸಿಂಗ್ ಪನ್ನುನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆದರೆ ಇಂತಹ ಕೆಲವು ಘಟನೆಗಳು ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಸಂಬಂಧವನ್ನು ಹಳಿತಪ್ಪಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಕಳೆದ ತಿಂಗಳು ಯುಎಸ್ ಫೆಡರಲ್ ಪ್ರಾಸಿಕ್ಯೂಟರ್ಗಳು ನಿಖಿಲ್ ಗುಪ್ತಾ ಗುರುಪಂತ್ ಸಿಂಗ್ ಪನ್ನುನ್ ಹತ್ಯೆಗೆ ಸುಪಾರಿ ಪಡೆದಿದ್ದ ಎಂದು ಘೋಷಿಸಿದ ಬಳಿಕ ಈ ಬಗ್ಗೆ ಮೋದಿ ನೀಡುತ್ತಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.
“ಯಾರಾದರೂ ನಮಗೆ ಯಾವುದೇ ಮಾಹಿತಿಯನ್ನು ನೀಡಿದರೆ, ನಾವು ಅದನ್ನು ಖಂಡಿತವಾಗಿ ಪರಿಶೀಲಿಸುತ್ತೇವೆ” ಎಂದು ಪ್ರಧಾನಿ ಫೈನಾನ್ಷಿಯಲ್ ಟೈಮ್ಸ್ಗೆ ಸಂದರ್ಶನ ನೀಡುವ ಸಂದರ್ಭದಲ್ಲಿ ಹೇಳಿದ್ದಾರೆ.
“ನಮ್ಮ ನಾಗರಿಕರು ಏನಾದರೂ ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡಿದ್ದರೆ, ಅದನ್ನು ಪರಿಶೀಲಿಸಲು ನಾವು ಸಿದ್ಧರಿದ್ದೇವೆ. ಕಾನೂನಿನ ನಿಯಮಕ್ಕೆ ನಮ್ಮ ಬದ್ಧತೆ ಇದೆ” ಎಂದಿದ್ದಾರೆ.
“ಆದರೆ, ಭಾರತ-ಯುಎಸ್ ಸಂಬಂಧದ ಬಲವರ್ಧನೆಗೆ ಬಲವಾದ ಉಭಯಪಕ್ಷೀಯ ಬೆಂಬಲವಿದೆ, ಇದು ಪ್ರಬುದ್ಧ ಮತ್ತು ಸ್ಥಿರ ಪಾಲುದಾರಿಕೆಯ ಸ್ಪಷ್ಟ ಸೂಚಕವಾಗಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.