ನವದೆಹಲಿ: 2031-32ರ ವೇಳೆಗೆ ಪರಮಾಣು ಶಕ್ತಿ ಸಾಮರ್ಥ್ಯವನ್ನು 7,480 ಮೆಗಾ ವ್ಯಾಟ್ನಿಂದ 22,480 ಮೆಗಾವ್ಯಾಟ್ಗೆ ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.
ನಿನ್ನೆ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಡಾ.ಸಿಂಗ್ ಅವರು ಈ ಮಾಹಿತಿಯನ್ನು ನೀಡಿದ್ದು, ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 35,334 ಮಿಲಿಯನ್ ಯುನಿಟ್ಗಳಿಂದ 2022-23 ರಲ್ಲಿ 46,982 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ. 2013-14ರಲ್ಲಿ 4,780 ಮೆಗಾ ವ್ಯಾಟ್ನ ಸ್ಥಾಪಿತ ಅಣುಶಕ್ತಿ ಸಾಮರ್ಥ್ಯ ಈಗ 7480 ಮೆಗಾ ವ್ಯಾಟ್ಗೆ ತಲುಪಿದೆ. ಪ್ರಸ್ತುತ 23 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗುಜರಾತ್, ರಾಜಸ್ಥಾನ, ತಮಿಳುನಾಡು, ಹರಿಯಾಣ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಒಟ್ಟು 8000 ಮೆಗಾ ವ್ಯಾಟ್ನ 10 ರಿಯಾಕ್ಟರ್ಗಳ ನಿರ್ಮಾಣ ಮತ್ತು ಕಾರ್ಯಾರಂಭ ನಡೆಯುತ್ತಿದೆ ಎಂದು ಅವರು ಹೇಳಿದರು.
ಹೆಚ್ಚುವರಿಯಾಗಿ, ಸರ್ಕಾರದಿಂದ ಮಂಜೂರಾದ 10 ರಿಯಾಕ್ಟರ್ಗಳಿಗೆ ಸಂಬಂಧಿಸಿದಂತೆ ಯೋಜನಾ ಪೂರ್ವ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಇವುಗಳನ್ನು 2031-32ರ ವೇಳೆಗೆ ಪ್ರಗತಿಪರವಾಗಿ ಪೂರ್ಣಗೊಳಿಸಲು ನಿಗದಿಪಡಿಸಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.