ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಐದು ವರ್ಷಗಳ ಆಡಳಿತದಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಪಡಿಸುವುದರಿಂದ ಹಿಡಿದು ಹೊಸ ಕ್ರಿಮಿನಲ್ ಕಾನೂನುಗಳವರೆಗೆ ಹಲವಾರು ಐತಿಹಾಸಿಕ ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ತರವಾದ ಬದಲಾವಣೆಗೆ ಸಾಕ್ಷಿಯಾಗಿದೆ. ವಸಾಹತುಶಾಹಿ ಛಾಪನ್ನು ಕೊನೆಗೊಳಿಸಲು ಸರ್ಕಾರವು ಭಾರತೀಯ ಕ್ರಿಮಿನಲ್ ಜಸ್ಟೀಸ್ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತಂದಿದೆ.
ಈ ಮಸೂದಿಗಳನ್ನು ಇಂದಿನ ಕಾಲದಅಗತ್ಯತೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು.
ಈ ತಿಂಗಳ 4 ರಂದು ಪ್ರಾರಂಭವಾಗಿ ನಿನ್ನೆ ಮುಕ್ತಾಯಗೊಂಡ ಸಂಸತ್ತಿನ ಚಳಿಗಾಲದ ಅಧಿವೇಶನದ ಉತ್ಪಾದಕತೆಯ ಬಗ್ಗೆ ವಿವರಗಳನ್ನು ನೀಡಿದ ಜೋಶಿ, ಉಭಯ ಸದನಗಳಲ್ಲಿ 19 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಹೇಳಿದರು.
ಸಂಸತ್ತಿನ ಭದ್ರತಾ ಉಲ್ಲಂಘನೆ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಭದ್ರತೆಯನ್ನು ಬಲಪಡಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ರಾಜ್ಯಸಭಾ ಅಧ್ಯಕ್ಷರ ಮಿಮಿಕ್ರಿ ಮಾಡಿದ ಪ್ರತಿಪಕ್ಷಗಳನ್ನು ಟೀಕಿಸಿದ ಅವರು ಅವರ ನಡವಳಿಕೆಯನ್ನು ಖಂಡಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜವಾಬ್ದಾರಿಯಿಂದ ಇರಲಿಲ್ಲ ಮತ್ತು ಈಗ ವಿರೋಧ ಪಕ್ಷವಾಗಿಯೂ ಅತ್ಯಂತ ಬೇಜವಾಬ್ದಾರಿಯಿಂದ ಇದೆ ಎಂದು ಅವರು ವ್ಯಂಗ್ಯವಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.