ನವದೆಹಲಿ: ಅಮೃತಕಾಲ ಸಂದರ್ಭದಲ್ಲಿ ಭಾರತವು ತನ್ನದೇ ಆದ ‘ಭಾರತ ಬಾಹ್ಯಾಕಾಶ ನಿಲ್ದಾಣ’ವನ್ನು ಹೊಂದಿರುತ್ತದೆ ಎಂದು ಇಸ್ರೋ ಅಧ್ಯಕ್ಷರ ಸೋಮನಾಥ್ ಹೇಳಿದ್ದಾರೆ.
ಶುಕ್ರವಾರ ಅಹಮದಾಬಾದ್ನ ಸೈನ್ಸ್ ಸಿಟಿಯಲ್ಲಿ ಭಾರತೀಯ ವಿಗ್ಯಾನ್ ಸಮ್ಮೇಳನ್ ಎಂಬ ಯುವ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ 25 ವರ್ಷಗಳಲ್ಲಿ ಭಾರತೀಯ ವಿಜ್ಞಾನಿಗಳು ಚಂದ್ರನ ಮೇಲೆ ಇಳಿಯಲಿದ್ದಾರೆ ಎಂದು ಹೇಳಿದ್ದಾರೆ. ತಮ್ಮ ಜ್ಞಾನ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಕೊಡುಗೆ ನೀಡುವಂತೆ ಅವರು ವಿದ್ಯಾರ್ಥಿ ವಿಜ್ಞಾನಿಗಳಿಗೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಸಮಾಜದ ಕಲ್ಯಾಣಕ್ಕಾಗಿ ಸಂಶೋಧನೆಯನ್ನು ಬಳಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ ಅವರು, ಇದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮದ ನಡುವಿನ ಸಮನ್ವಯ ಮತ್ತು ವಿನಿಮಯ ಅತ್ಯಗತ್ಯ ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಗುರಿಯನ್ನು ಸಾಧಿಸುವಲ್ಲಿ ತಂತ್ರಜ್ಞಾನದ ಪಾತ್ರ ಬಹಳ ಮುಖ್ಯ ಎಂದರು.
ಭಾರತೀಯ ವಿಗ್ಯಾನ್ ಸಮ್ಮೇಳನದಲ್ಲಿ ಪ್ರಮುಖ ವಿಜ್ಞಾನಿಗಳು, ವಿದ್ಯಾರ್ಥಿಗಳು ಮತ್ತು ದೇಶದ ಸಂಶೋಧಕರು ಭಾಗವಹಿಸುತ್ತಿದ್ದಾರೆ, ಇದು ಡಿಸೆಂಬರ್ 21 ರಿಂದ 24 ರವರೆಗೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.