ನವದೆಹಲಿ: ಬುಡಕಟ್ಟು ಸಮುದಾಯದ ಏಳಿಗೆಗೆ ನರೇಂದ್ರ ಮೋದಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಏಕಲವ್ಯ ಮಾದರಿ ವಸತಿ ಯೋಜನೆಗಳು ಪ್ರಮುಖವಾದುದು. ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು, ಬುಡಕಟ್ಟು ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ 740 ಏಕಲವ್ಯ ಮಾದರಿ ವಸತಿ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಶುಕ್ರವಾರ ಪಶ್ಚಿಮ ಬಂಗಾಳದ ಜಾರ್ಗ್ರಾಮ್ನ ಬೆಟ್ಕುಂದ್ರಿ ಮೈದಾನದಲ್ಲಿ ಸಂತಾಲಿ ಭಾಷೆಗೆ ಸಾಂವಿಧಾನಿಕ ಮಾನ್ಯತೆಯ ವಾರ್ಷಿಕೋತ್ಸವದ “ಸಂತಾಲಿ ಭಾಷಾ ವಿಜಯ ದಿವಸ” ಸಮಾರಂಭದಲ್ಲಿ ಮಾತನಾಡಿದ ಅವರು, ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಏಕಲವ್ಯ ವಸತಿ ಶಾಲೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಮುಂಡಾ, 6 ರಿಂದ 18 ತರಗತಿಯ ವಿದ್ಯಾರ್ಥಿಗಳಿಗೆ ಈ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡಲಾಗುವುದು. ದೇಶಾದ್ಯಂತ 10 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಜಾಹೀರಾತು ಪ್ರಕಟಿಸಲಾಗುವುದು. ಪ್ರಸ್ತುತ, ದೇಶದಲ್ಲಿ ಸುಮಾರು 200 ಏಕಲವ್ಯ ಮಾದರಿ ವಸತಿ ಶಾಲೆಗಳಿವೆ ಎಂದು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.