ನವದೆಹಲಿ: ಜನವರಿ 26, 2024 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ 75 ನೇ ಗಣರಾಜ್ಯೋತ್ಸವದ ಪರೇಡ್ನಲ್ಲಿ ಪಾಲ್ಗೊಳ್ಳುವುದಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ದೃಢಪಡಿಸಿದ್ದಾರೆ. ಈ ಮೂಲಕ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಆರನೇ ಫ್ರೆಂಚ್ ನಾಯಕನಾಗಲಿದ್ದಾರೆ. ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಭಾರತ ಸರ್ಕಾರದಿಂದ ತನಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವುದಾಗಿ ‘X’ ನಲ್ಲಿ ಘೋಷಿಸಿದ್ದಾರೆ.
“ನಿಮ್ಮ ಆಹ್ವಾನಕ್ಕೆ ಧನ್ಯವಾದಗಳು ನನ್ನ ಆತ್ಮೀಯ ಗೆಳೆಯ ನರೇಂದ್ರ ಮೋದಿಯವರೇ. ಭಾರತದ ಗಣರಾಜ್ಯೋತ್ಸವವನ್ನು ಆಚರಿಸಲು ನಾನು ಅಲ್ಲಿ ಇರಲಿದ್ದೇನೆ!” ಎಂದು ಮ್ಯಾಕ್ರನ್ X ನಲ್ಲಿ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮ್ಯಾಕ್ರನ್ ಅವರಿಗೆ ಪ್ರತಿಕ್ರಿಯೆ ನೀಡಿ, “ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್, 75 ನೇ ಗಣರಾಜ್ಯೋತ್ಸವದಲ್ಲಿ ನಿಮ್ಮನ್ನು ಮುಖ್ಯ ಅತಿಥಿಯಾಗಿ ಸ್ವೀಕರಿಸಲು ನಾವು ಕುತೂಹಲದಿಂದ ಎದುರು ನೋಡುತ್ತಿದ್ದೇವೆ. ನಾವು ಭಾರತ-ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆಯನ್ನು ಹಂಚಿಕೊಂಡಿದ್ದೇದೆ” ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮ್ಯಾಕ್ರನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
“ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು 75 ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.
My Dear Friend President @EmmanuelMacron, we eagerly look forward to receiving you as the Chief Guest at the 75th Republic Day. We will also celebrate India- France strategic partnership and shared belief in democratic values. Bientôt ! https://t.co/jvzvOY2NNa
— Narendra Modi (@narendramodi) December 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.