ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಪಡೆಗಳು ಹೆಚ್ಚಿನ ಕಣ್ಗಾವಲು ಇರಿಸಿದ್ದು, ಕಳೆದ ತಡರಾತ್ರಿ ಅಖ್ನೂರ್ನ ಖೌರ್ ಉಪ ವಲಯದಲ್ಲಿ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ.
ಡಿಸೆಂಬರ್ 22 ಮತ್ತು 23 ರ ಮಧ್ಯರಾತ್ರಿಯಲ್ಲಿ ನಾಲ್ವರು ಭಯೋತ್ಪಾದಕರ ಶಂಕಿತ ಚಲನವಲನವನ್ನು ಕಣ್ಗಾವಲು ಸಾಧನಗಳ ಮೂಲಕ ಸೇನೆ ಕಂಡುಹಿಡಿದಿತ್ತು. ತಕ್ಷಣ ಕಾರ್ಯಪ್ರವೃತ್ತರಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ ತರುವಾಯ ಭಯೋತ್ಪಾದಕರು ಅಂತಾರಾಷ್ಟ್ರೀಯ ಗಡಿಯಿಂದ ಹಿಂದಕ್ಕೆ ಓಡಿಹೋಗುತ್ತಿರುವ ಮತ್ತು ಅವರೊಂದಿಗೆ ಒಂದು ದೇಹವನ್ನು ಎಳೆದುಕೊಂಡು ಹೋಗುತ್ತಿರುವ ದೃಶಯ ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ, ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡ ಪೂಂಚ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ತರಲಾಗಿದೆ. ಹೆಲಿಕಾಪ್ಟರ್ಗಳ ಮೂಲಕ ವೈಮಾನಿಕ ಮಾನಿಟರಿಂಗ್ ಕೂಡ ನಡೆಸಲಾಗುತ್ತಿದೆ ಮತ್ತು ಸೇನಾ ವಾಹನಗಳ ಮೇಲೆ ದಾಳಿ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಸ್ನಿಫರ್ ಡಾಗ್ಗಳನ್ನು ಸೇವೆಗೆ ಒಯ್ಯಲಾಗಿದೆ.
ಅಧಿಕೃತ ಮೂಲಗಳ ಪ್ರಕಾರ, ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ ಸುಮಾರು 12 ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದಿರುವ ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯ ಸ್ಥಳೀಯ ಬೆಂಬಲದೊಂದಿಗೆ ಭಯೋತ್ಪಾದಕ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.