ಬೆಂಗಳೂರು: 2047 ರಲ್ಲಿ ದೇಶವನ್ನು ಕ್ರೀಡಾ ಸೂಪರ್ ಪವರ್ ಮಾಡಲು ಎಲ್ಲಾ ಜನರು ಬೆಂಬಲವನ್ನು ನೀಡಬೇಕು ಎಂದು ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಕರೆ ನೀಡಿದ್ದಾರೆ.
ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಚಾಂಪಿಯನ್ ಅಥ್ಲೀಟ್ಗಳಿಗೆ ಸನ್ಮಾನ ನಡೆಸಿದ ಬಳಿಕ ಮಾತನಾಡಿದ ಸಚಿವರು, ಖೇಲೋ ಇಂಡಿಯಾದ ಯಶಸ್ಸಿಗೆ ಒತ್ತು ನೀಡಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಚಾಂಪಿಯನ್ಗಳು ಹೊರಹೊಮ್ಮಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಇದಕ್ಕೆ ಕಾರಣ ಎಂದು ಹೇಳಿದರು.
ಜನರು ವಿಶೇಷವಾಗಿ ಮಾಜಿ ಕ್ರೀಡಾಪಟುಗಳು ಮೈ ಭಾರತ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಸಚಿವರು ಕರೆ ನೀಡಿದರು ಮತ್ತು ನಮ್ಮ ದೇಶದ ದೂರದ ಪ್ರದೇಶಗಳ ಯುವಕರು ಮುಂದೆ ಬರಲು ಪ್ರೋತ್ಸಾಹಿಸಲು ಈ ವೇದಿಕೆಯನ್ನು ಬಳಸಿಕೊಳ್ಳುವಂತೆ ಮಾಡಬೇಕು ಎಂದರು.
ಪ್ರತಿಭಾವಂತ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು, ಜಾಗತಿಕ ಗುಣಮಟ್ಟಕ್ಕೆ ಹೊಂದಿಕೊಳ್ಳಲು ಕೇಂದ್ರ ಸರ್ಕಾರವು ಹೇಗೆ ವೇದಿಕೆಯನ್ನು ಒದಗಿಸಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಕಳೆದ ಎರಡು ವರ್ಷಗಳಲ್ಲಿ ಭಾರತವು ಎಲ್ಲಾ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅತ್ಯಧಿಕ ಪದಕಗಳನ್ನು ಗೆದ್ದಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಸರ್ಕಾರವು ಕ್ರೀಡಾ ಬಜೆಟ್ ಹಂಚಿಕೆಯನ್ನು ಮೂರು ಪಟ್ಟು ಹೆಚ್ಚಿಸಿದೆ ಎಂದರು.
ಠಾಕೂರ್ ಅವರು ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್ನ ಹೊಸದಾಗಿ ನಿರ್ಮಿಸಲಾದ ಬ್ಲಾಕ್ಗಳನ್ನು ಮತ್ತು ಹೊಸ ಸಿಂಥೆಟಿಕ್ ಟ್ರ್ಯಾಕ್ ಅನ್ನು ಉದ್ಘಾಟಿಸಿದರು.
ಇದಕ್ಕೂ ಮುನ್ನ ಅವರು ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡ ಸೇರಿದಂತೆ NCOE ಅಥ್ಲೀಟ್ಗಳೊಂದಿಗೆ ಸಂವಾದ ನಡೆಸಿದರು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಸಿಂಥೆಟಿಕ್ ಟ್ರ್ಯಾಕ್, ಜಿಮ್ನಾಷಿಯಂ ಮತ್ತು ಮೆಸ್ನಂತಹ ಹೊಸ ಸೌಲಭ್ಯಗಳನ್ನು ಪರಿಶೀಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.