ರಾಯ್ಪುರ: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಕನಿಷ್ಠ 4 ಮಂದಿ ನಕ್ಸಲರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
“,ಗುಂಡಿನ ಚಕಮಕಿಯಲ್ಲಿ ಕನಿಷ್ಠ 4ರಿಂದ 5 ಮಂದಿ ನಕ್ಸಲರು ಹತರಾಗಿದ್ದಾರೆ. ನಕ್ಸಲರು ಮತ್ತು ಸುಕ್ಮಾ, ದಾಂತೇವಾಡ ಜಿಲ್ಲೆಗಳ ಜಿಲ್ಲಾ ಮೀಸಲು ಗುಂಪಿನ (ಡಿಆರ್ಜಿ) ಜಂಟಿ ತಂಡ ಮತ್ತು ಸಿಆರ್ಪಿಎಫ್ನ 2 ಮತ್ತು 111 ನೇ ಬೆಟಾಲಿಯನ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ” ಎಂದು ವರದಿಗಳು ತಿಳಿಸಿವೆ.
ಪಡೆಗಳು ಗೋಗುಂಡಾ ಪ್ರದೇಶದಲ್ಲಿ ದಿನನಿತ್ಯದ ಗಸ್ತು ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾಗ ನಕ್ಸಲೀಯರು ಗುಂಡು ಹಾರಿಸಲು ಆರಂಭಿಸಿದರು, ಬಳಿಕ ಎನ್ಕೌಂಟರ್ ಆರಂಭಗೊಂಡಿತು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಗಾಯಗೊಂಡ ನಕ್ಸಲೀಯರನ್ನು ಸುತ್ತುವರಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಸಿಎಂ ಸಾಯಿ ಅವರು ದೆಹಲಿಯ ನಿವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ಕಳೆದ ತಿಂಗಳು ವಿಧಾನಸಭೆ ಚುನಾವಣೆಗೆ ಮುನ್ನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು.
ಉಪರಾಷ್ಟ್ರಪತಿ ಧಂಖರ್ ಅವರನ್ನೂ ಅವರ ನಿವಾಸದಲ್ಲಿ ಮುಖ್ಯಮಂತ್ರಿಗಳು ಭೇಟಿಯಾದರು. ಅವರ ಜೊತೆ ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೋ ಮತ್ತು ವಿಜಯ್ ಶರ್ಮಾ ಕೂಡ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.