ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಮೆಡ್ಟೆಕ್ ಮಿತ್ರವನ್ನು ಪ್ರಾರಂಭಿಸಿದ್ದಾರೆ. ಇದು ಮೆಡ್ಟೆಕ್ ಸ್ಟಾರ್ಟ್ಅಪ್ಗಳನ್ನು ಸಶಕ್ತಗೊಳಿಸಲು ಮತ್ತು ಆರೋಗ್ಯ ರಕ್ಷಣೆಯ ಪರಿಹಾರಗಳನ್ನು ಮುನ್ನಡೆಸುವ ನಿಟ್ಟಿನಲ್ಲಿನ ಕಾರ್ಯತಂತ್ರದ ಉಪಕ್ರಮವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೆಡ್ಟೆಕ್ ಮಿತ್ರಾ ಭಾರತೀಯ ಮೆಡ್ಟೆಕ್ ಉದ್ಯಮಕ್ಕೆ ಗೇಮ್ಚೇಂಜರ್ ಆಗಿರುತ್ತದೆ ಮತ್ತು ಕೈಗೆಟುಕುವ, ಗುಣಮಟ್ಟದ ಮೆಡ್ಟೆಕ್ ಸಾಧನಗಳು ಮತ್ತು ಡಯಾಗ್ನೋಸ್ಟಿಕ್ಗಳ ಸ್ಥಳೀಯ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುತ್ತದೆ ಎಂದಿದ್ದಾರೆ.
ವೈದ್ಯಕೀಯ ಸಾಧನಗಳ ವಲಯವು ಭಾರತದ ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ ಎಂದು ಡಾ. ಮಾಂಡವಿಯಾ ಹೇಳಿದ್ದಾರೆ.
2047 ರ ವೇಳೆಗೆ ದೇಶದ ಆರೋಗ್ಯ ಚಿತ್ರಣವನ್ನು ಪರಿವರ್ತಿಸುವ ದೃಷ್ಟಿಯೊಂದಿಗೆ ಭಾರತವು ಆರೋಗ್ಯಕ್ಕೆ ಸಮಗ್ರ ವಿಧಾನವನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.