ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಡಿ ಕ್ರೀಡಾಪಟುಗಳಿಗೆ ದೊರೆಯುತ್ತಿರುವ ಪ್ರೋತ್ಸಾಹವನ್ನುಮಾಜಿ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಮೋದಿ ಆಯೋಜಿಸಿದ್ದ ಕ್ರಿಸ್ಮಸ್ ಸಮಾರಂಭದಲ್ಲಿ ಮಾತನಾಡಿದ್ದ ಅಂಜು, “ಒಬ್ಬ ಕ್ರೀಡಾಪಟುವಾಗಿ ನಾನು ಕಳೆದ 25 ವರ್ಷಗಳಿಂದ ಎಲ್ಲವನ್ನೂ ವೀಕ್ಷಿಸುತ್ತಿದ್ದೇನೆ. ಹಿಂದಿನ ಸಮಯಕ್ಕೆ ಹೋಲಿಸಿದರೆ ಈಗ ನಾನು ಗಮನಾರ್ಹ ಬದಲಾವಣೆಗಳನ್ನು ನೋಡುತ್ತಿದ್ದೇನೆ. ನೀರಜ್ ಚೋಪ್ರಾ ಪದಕ ಗೆದ್ದ ನಂತರ, ನಾನು ಸಾಕಷ್ಟು ಬದಲಾವಣೆಗಳನ್ನು ಕಂಡೆ. ನಾವು, ನೀವು ಮತ್ತು ಇಡೀ ಭಾರತ ಅವರ ಗೆಲುವನ್ನು ಆಚರಿಸಿದ ರೀತಿ ನನಗೆ ಅಸೂಯೆ ಹುಟ್ಟಿಸಿತು. ನಾನು ಕ್ರೀಡಾಳುವಾಗಿ ತಪ್ಪು ಯುಗದಲ್ಲಿದ್ದೇದ್ದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
ಈ ಮೂಲಕ ಅವರು ಹಿಂದಿನ ಸರ್ಕಾರಗಳು ಕ್ರೀಡೆಗೆ ಪ್ರೋತ್ಸಾಹ ನೀಡದೇ ಇರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ ಮತ್ತು ನಾನು ತಪ್ಪು ಅವಧಿಯಲ್ಲಿ ಕ್ರೀಡಾಪಟುವಾಗಿದ್ದೆ ಎಂಬ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.