ಬೆಂಗಳೂರು: ಕನ್ನಡ ಕರ್ನಾಟಕದ ಸಾರ್ವಭೌಮ ಭಾಷೆ. ಹೀಗಾಗಿ ಕನ್ನಡ ನಾಮಫಲಕ ಕಡ್ಡಾಯವಾಗಿ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅಲ್ಲದೇ ಶೇ.60ರಷ್ಟು ಕನ್ನಡದಲ್ಲಿಯೇ ನಾಮಫಲಕ ಇರುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರತಿಭಟನೆ ಮಾಡಿದ ಕಾರಣಕ್ಕೆ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಕಾನೂನನ್ನು ಕೈಗೆತ್ತಿಕೊಂಡರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು.
ಈ ಮಧ್ಯೆ ಇಂದು ಮಧ್ಯಾಹ್ನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಗೃಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕನ್ನಡ ನಾಮಫಲ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವು ಶಾಪಿಂಗ್ ಸೆಂಟರ್ ಗಳ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದ್ದರು. ಹೀಗಾಗಿ ಅನೇಕರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.