ನವದೆಹಲಿ: ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ 8 ಭಾರತೀಯರ ವಿಷಯದಲ್ಲಿ ಭಾರತ ಸರ್ಕಾರ ನಡೆಸಿದ ಪ್ರಯತ್ನ ಸಫಲವಾಗಿದೆ. ಕತಾರ್ನ ಮೇಲ್ಮನವಿ ನ್ಯಾಯಾಲಯವು ದಾಹ್ರಾ ಗ್ಲೋಬಲ್ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತೀಯರ ಶಿಕ್ಷೆಯನ್ನು ಕಡಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇವರ ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ಪರಿವರ್ತಿಸಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲು ಕಾನೂನು ತಂಡ ಮತ್ತು ಆರೋಪಿಗಳ ಕುಟುಂಬ ಸದಸ್ಯರು ಭಾರತೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಕತಾರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ಪ್ರಜೆಗಳ ವಿರುದ್ಧ ಗೂಢಚರ್ಯೆ ನಡೆಸಿದ ಆರೋಪದ ಮೇರೆಗೆ ಮರಣದಂಡನೆಯ ಶಿಕ್ಷೆಯನ್ನು ಕತಾರ್ ಕೋರ್ಟ್ ಘೋಷಿಸಿತ್ತು. ಇವರ ವಿರುದ್ಧ ವಂಚನೆ, ಫೋರ್ಜರಿ ಮತ್ತು ಮನಿ ಲಾಂಡರಿಂಗ್ ಆರೋಪಗಳನ್ನೂ ಹಾಕಲಾಗಿತ್ತು. ಈ ಪ್ರಕರಣ ಹಲವು ವರ್ಷಗಳಿಂದ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಪ್ರಕರಣದ ಪ್ರಕ್ರಿಯೆಗಳ ಗೌಪ್ಯ ಮತ್ತು ಸೂಕ್ಷ್ಮ ಸ್ವರೂಪದ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಮಾಹಿತಿ ನೀಡುವುದು ಸೂಕ್ತವಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.