ಚೆನ್ನೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನ ರಾಮನಾಥಪುರ ಸಮೀಪದ ಲಂಧೈ ಗ್ರಾಮದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿದ ಕಾರಣಕ್ಕಾಗಿ ಅಲ್ಲಿನ ಗ್ರಾಮಸ್ಥರು ರಸ್ತೆಗೆ ಅವರ ಹೆಸರನ್ನೇ ಇಟ್ಟಿದ್ದಾರೆ.
ರಾಮನಾಥಪುರ ಸಮೀಪದ ಲಂಧಾಯಿ ಗ್ರಾಮದಲ್ಲಿ ರೈಲ್ವೆ ಸುರಂಗ ಮಾರ್ಗವನ್ನು ಮುಚ್ಚಿ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ಗ್ರಾಮಸ್ಥರು 14 ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಅವರ ಸುದೀರ್ಘ ವರ್ಷಗಳ ಬೇಡಿಕೆ ನಿರ್ಮಲಾ ಸೀತಾರಾಮನ್ ಅವರಿಂದ ಸಾಕಾರಗೊಳ್ಳುತ್ತಿದೆ.
ಸ್ಥಳೀಯರ ಮನವಿಗೆ ಸ್ಪಂದಿಸಿದ ನಿರ್ಮಲಾ ಸೀತಾರಾಮನ್ ಅವರು ಪೂರ್ವಭಾವಿ ಕ್ರಮಗಳನ್ನು ಕೈಗೊಂಡು, ಸಂತ್ರಸ್ಥ ಗ್ರಾಮಗಳಿಗೆ ಅನುಕೂಲವಾಗುವ ಮೇಲ್ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದ್ದರು. ನಾಲ್ಕು ತಿಂಗಳಲ್ಲಿ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, 2000 ಜನರ ಕೃಷಿ ಮತ್ತು ಜೀವನೋಪಾಯವನ್ನು ರಕ್ಷಿಸಲು ಸೇತುವೆಯನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದು ನಿರ್ಮಲಾ ಸೀತಾರಾಮನ್ ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದ್ದಾರೆ.
“ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಮತ್ತು ಶೀಘ್ರದಲ್ಲೇ ಕೆಲಸ ಮಾಡಲಾಗುವುದು” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗ್ರಾಮಸ್ಥರು ತಮ್ಮ ಗ್ರಾಮ ಸಭೆಯಲ್ಲಿ ನಿರ್ಣಯ ಅಂಗೀಕರಿಸಿ ತಮ್ಮ ಊರಿನ ರಸ್ತೆ ʼನಿರ್ಮಲಾ ಸೀತಾರಾಮನ್ ರಸ್ತೆʼ ಎಂದು ಮರುನಾಮಕರಣ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.