ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಬಿಹಾರ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಲಾಲನ್ ಸಿಂಗ್ ಅವರು ಹುದ್ದೆಯಿಂದ ಕೆಳಗಿಳಿದ ಕೆಲವೇ ಕ್ಷಣದಲ್ಲಿ ಕುಮಾರ್ ಅವರನ್ನು ಪಕ್ಷದ ಉನ್ನತ ಹುದ್ದೆಗೆ ನೇಮಿಸಲಾಗಿದೆ. ದೆಹಲಿಯ ಕಾನ್ ಸ್ಟಿಟ್ಯೂಷನ್ ಕ್ಲಬ್ ನಲ್ಲಿ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ರಾಜೀವ್ ರಂಜನ್ ಸಿಂಗ್ ಅಕಾ ಲಲನ್ ಸಿಂಗ್ ರಾಜೀನಾಮೆ ನೀಡಿದರು.
ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಲಾಲನ್ ಸಿಂಗ್ ಅವರು ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಇದನ್ನು ಉನ್ನತ ನಾಯಕತ್ವ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ನಿರ್ಣಾಯಕ ಲೋಕಸಭಾ ಚುನಾವಣೆಯ ಪೂರ್ವದಲ್ಲಿ, ತನ್ನ ಸಂಘಟನಾ ರಚನೆಯ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಜ್ಜಾಗಿರುವ ಜನತಾ ದಳ (ಯುನೈಟೆಡ್) ಈಗ ನಿತೀಶ್ ಕುಮಾರ್ ನೇತೃತ್ವದಲ್ಲಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂಬುದು ಸ್ಪಷ್ಟಪಡಿಸಿದೆ. ಜೆಡಿಯುನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸಂಜೆ 5 ಗಂಟೆ ಸುಮಾರಿಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಬೆಳಿಗ್ಗೆ 11 ಗಂಟೆಗೆ ಆರಂಭವಾದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜೀವ್ ರಂಜನ್ (ಲಾಲನ್) ಸಿಂಗ್ ಮತ್ತು ಪಕ್ಷದ ಇತರ ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.