ನವದೆಹಲಿ: ಅದಾನಿ-ಹಿಂಡರ್ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅರ್ಜಿಗಳು ಸಲ್ಲಿಕೆಯಾದ ತಿಂಗಳ ನಂತರ ಸುಪ್ರೀಂಕೋರ್ಟ್ ಬಹು ನಿರೀಕ್ಷಿತ ತೀರ್ಪನ್ನು ಇಂದು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು, ಪ್ರಕರಣದ ವಿಚಾರಣೆಯನ್ನು ಸೆಬಿಯಿಂದ ಎಸ್ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ ಎಂದು ಹೇಳಿದೆ ಮತ್ತು ಕಾನೂನಿನ ನಿಬಂಧನೆಗಳ ಪ್ರಕಾರ ಅದರ ತನಿಖೆಯನ್ನು ಮುಂದುವರಿಸಲು ಸೆಬಿಗೆ ಸೂಚಿಸಿದೆ.
ಪ್ರಕರಣದ ಸಂಗತಿಗಳು ತನಿಖೆಯನ್ನು ಎಸ್ಐಟಿ ಅಥವಾ ಇತರ ಏಜೆನ್ಸಿಗೆ ವರ್ಗಾಯಿಸುವುದನ್ನು ಸಮರ್ಥಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೆಬಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ 24 ಪ್ರಕರಣಗಳ ಪೈಕಿ 22 ಪ್ರಕರಣಗಳಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಮತ್ತು ಸೆಬಿಯ ತನಿಖಾ ಅಧಿಕಾರವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ನಡುವೆ ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿದ ಬಿಲಿಯನೇರ್ ಗೌತಮ್ ಅದಾನಿ, ಸತ್ಯ ಮೇಲುಗೈ ಸಾಧಿಸಿದೆ. ‘ಸತ್ಯಮೇವ ಜಯತೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಬಿಕ್ಕಟ್ಟಿನ ಸಂದರ್ಭದಲ್ಲಿ ತನಗೆ ಮತ್ತು ಕಂಪನಿಗೆ ಬೆಂಬಲವಾಗಿ ನಿಂತ ಜನರಿಗೆ ಅದಾನಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.