ದಿಯು: ನೆಹರು ಯುವ ಕೇಂದ್ರವು ನಿನ್ನೆ ದಿಯುವಿನ ಮಲಾಲಾ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ‘ಮೈ ಭಾರತ್ ಮೇರಾ ಯುವ ಭಾರತ್’ ವಿಷಯದ ಯುವ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಭಾಗವಹಿಸಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣದಲ್ಲಿ ಯುವಜನತೆ ಮುಂದಾಗಬೇಕು, ದೇಶದ ಯುವಕರ ಶಕ್ತಿಯನ್ನು ರಾಷ್ಟ್ರ ನಿರ್ಮಾಣದಲ್ಲಿ ಬಳಸಿಕೊಳ್ಳಬೇಕು ಹಾಗೂ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕನಸನ್ನು ನನಸಾಗಿಸಲು ಯುವಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಮರ್ಥ ಯುವಕರು ಬಲಿಷ್ಠ ಭಾರತವನ್ನು ರಚಿಸಬಹುದು ಮತ್ತು ಕ್ರೀಡೆಗಳು ಬಹಳ ಮುಖ್ಯ ಎಂದು ಹೇಳಿದ ಕೇಂದ್ರ ಕ್ರೀಡಾ ಸಚಿವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆಗಳ ಬಗ್ಗೆ ಮಾತನಾಡಿದರು.
ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಡ್ರಗ್ ಮುಕ್ತ ಭಾರತ ಎಂಬ ಘೋಷಣೆಗಳನ್ನು ನೀಡಿದ ಠಾಕೂರ್, ಯುವಕರು ಕ್ರೀಡೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಿ, ಆರೋಗ್ಯವಂತರಾಗಿ, ಮಾದಕ ವ್ಯಸನದಿಂದ ದೂರವಿರಿ, ಸದೃಢರಾಗಿ ಎಂದು ಮನವಿ ಮಾಡಿದರು.
ದಿಯು ಮೊದಲ ಬಾರಿಗೆ ಬೀಚ್ ಗೇಮ್ ಫೆಸ್ಟಿವಲ್ ಅನ್ನು ಆಯೋಜಿಸುತ್ತಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಈ ಉತ್ಸವವು ಕ್ರೀಡಾ ಕ್ಷೇತ್ರದಲ್ಲಿ ವಿಭಿನ್ನ ಕ್ರಾಂತಿಯನ್ನು ತರುತ್ತದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.