ನವದೆಹಲಿ: ಹರಿಯಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ದಾಳಿಗಳು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಅಂಶಗಳನ್ನು ಬಹಿರಂಗಪಡಿಸಿವೆ.
ಐಎನ್ಎಲ್ಡಿ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ಗೆ ಸಂಬಂಧಿಸಿದ ವಿವಿಧ ನಗರಗಳಲ್ಲಿನ ಸುಮಾರು 20 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ನಿನ್ನೆಯಿಂದ ನಡೆಸಲಾದ ದಾಳಿಯಲ್ಲಿ 100 ಮದ್ಯದ ಬಾಟಲಿಗಳು, 5 ಕೋಟಿ ರೂಪಾಯಿ ನಗದು, ಅಕ್ರಮ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಸುಮಾರು 300 ಕಾಟ್ರಿಡ್ಜ್ಗಳನ್ನು ದೊರೆತಿವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಗಣಿಗಾರಿಕೆ ಪ್ರಕರಣದಲ್ಲಿ ಸಂಭಾವ್ಯ ಹಣ ವರ್ಗಾವಣೆಯನ್ನು ಸೂಚಿಸುವ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಳಿ ನಡೆಸಲಾಗಿದೆ.
ಲೀಸ್ ಅವಧಿಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ಮೀರಿ ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಣಕಾಸು ವಂಚನೆ ಪ್ರಕರಣವು ಉದ್ಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.