ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಇನ್ನು ಕೆಲವೇ ದಿನಗಳಿವೆ. ಆಹ್ವಾನ ಪತ್ರಿಕೆಯ ಹಂಚಿಕೆ ಭರದಿಂದ ಸಾಗುತ್ತಿದೆ. ಈಗಾಗಲೇ ಅನೇಕ ಗಣ್ಯಾತಿಗಣ್ಯರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಲು ಆಹ್ವಾನ ಪಡೆದಿದ್ದಾರೆ. ಇಂದು ಬಾಬ್ರಿ ಮಸೀದಿ ಧ್ವಂಸ ಪರವಾದ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ನಿರ್ವಹಣೆಯನ್ನು ನೋಡಿಕೊಳ್ಳುತ್ತಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಬಾಬರಿ ಮಸೀದಿಯ ಮುಖ್ಯ ದಾವೆದಾರ ಇಕ್ಬಾಲ್ ಅನ್ಸಾರಿ ಅವರಿಗೆ ಆಹ್ವಾನ ಪತ್ರಿಕೆಯನ್ನು ಹಸ್ತಾಂತ ಮಾಡಿದೆ.
ಇತ್ತೀಚಿಗಷ್ಟೇ ಅಯೋಧ್ಯೆಗೆ ಮೋದಿ ಭೇಟಿ ನೀಡಿದ್ದ ವೇಳೆ ಅನ್ಸಾರಿ ಅವರು ಹೂ ಹಾಕಿ ಅವರನ್ನು ಸ್ವಾಗತಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.
#WATCH | Ayodhya, Uttar Pradesh | Former litigant in Ayodhya land dispute case, Iqbal Ansari received an invitation to the 'Pranpratishtha' ceremony of Ram Temple scheduled for January 22. On behalf of Shri Ram Janmbhoomi Teerth Kshetra, workers of RSS handed him the invitation… pic.twitter.com/USD3hB1ba7
— ANI (@ANI) January 5, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.