ನವದೆಹಲಿ: ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು ದೇಶಾದ್ಯಂತ ಬೂತ್ ಮಟ್ಟದಲ್ಲಿ ನೇರ ಪ್ರಸಾರ ಮಾಡುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ
ಪಕ್ಷದ ಮೂಲಗಳ ಪ್ರಕಾರ, ಬೂತ್ ಮಟ್ಟದಲ್ಲಿ ಶ್ರೀರಾಮ ಪ್ರತಿಷ್ಠಾಪನೆಯ ನೇರ ಪ್ರಸಾರಕ್ಕಾಗಿ ದೊಡ್ಡ ಪರದೆಗಳನ್ನು ಸ್ಥಾಪಿಸಲು ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಇದರಿಂದ ಶ್ರೀ ರಾಮ ಲಾಲಾನ ಪ್ರಾಣ ಪ್ರತಿಷ್ಠೆಯನ್ನು ವೀಕ್ಷಣೆ ಮಾಡಲು ಜನ ಸಾಮಾನ್ಯ ಒಂದು ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ.
ಈ ಮೂಲಕ ಸಾರ್ವಜನಿಕರು ಶ್ರೀರಾಮ ಲಾಲನ ದರ್ಶನ ಪಡೆಯಬಹುದು ಮತ್ತು ಪ್ರಾಣ ಪ್ರತಿಷ್ಠೆ ಸಮಾರಂಭವನ್ನು ವೀಕ್ಷಿಸಬಹುದು ಎಂದು ಮೂಲಗಳು ತಿಳಿಸಿವೆ.
ಹೆಚ್ಚುವರಿಯಾಗಿ, ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವೈಯಕ್ತಿಕ ಮಟ್ಟದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ
” ಕಂಬಳಿಗಳ ವಿತರಣೆ, ಸಮುದಾಯ ಹಬ್ಬಗಳ ಆಯೋಜನೆ ಅಥವಾ ಅಗತ್ಯವಿರುವವರಿಗೆ ಸಹಾಯ ಮಾಡಲು ಆಹಾರ ಅಥವಾ ಹಣ್ಣುಗಳ ವಿತರಣೆಯಲ್ಲಿ ಕಾರ್ಯಕರ್ತರು ಭಾಗಿಯಾಗಬಹುದು” ಎಂದು ಮೂಲಗಳು ತಿಳಿಸಿವೆ.
ಜನವರಿ 22 ರಂದು ರಾಮಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮವು ಭಾರೀ ಗಮನ ಸೆಳೆದಿದೆ, ಭಾರತ ಮತ್ತು ವಿದೇಶದಿಂದ ಹಲವಾರು ವಿವಿಐಪಿ ಅತಿಥಿಗಳು ಅಯೋಧ್ಯೆಯಲ್ಲಿ ಶುಭ ಸಂದರ್ಭದಲ್ಲಿ ಭಾಗವಹಿಸಲು ಆಹ್ವಾನಗಳನ್ನು ಸ್ವೀಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.