ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತವು ವಿಶ್ವದ ಎರಡನೇ ಅತಿದೊಡ್ಡ ರಸ್ತೆ ಜಾಲ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ. ಈ ಮೂಲಕ ಚೀನಾವನ್ನು ಹಿಂದಿಕ್ಕಿದೆ.
ಹ್ಯಾಂಡಲ್ ದಿ ವರ್ಲ್ಡ್ ರ್ಯಾಂಕಿಂಗ್ ಪ್ರಕಾರ, ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಜಾಲವನ್ನು ಹೊಂದಿರುವ ದೇಶಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಮೆರಿಕದ 68.32 ಲಕ್ಷ ಕಿಮೀ ಮತ್ತು ಚೀನಾದ 52 ಲಕ್ಷ ಕಿಮೀಗೆ ಹೋಲಿಸಿದರೆ ಭಾರತವು 67 ಲಕ್ಷ ಕಿಮೀ ರಸ್ತೆ ಜಾಲವನ್ನು ಹೊಂದಿತ್ತು.
ಭಾರತದ ರಸ್ತೆ ಜಾಲದ ಕುರಿತು ಪ್ರತಿಕ್ರಿಯಿಸಿದ ಉದ್ಯಮಿ ಆನಂದ್ ಮಹೀಂದ್ರಾ, ಭಾರತವು ಚೀನಾವನ್ನು ಹಿಂದಿಕ್ಕಿದೆ ಮತ್ತು ಭಾರತವು ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಜಾಲವನ್ನು ಹೊಂದಿರುವ ಯುಎಸ್ ಅನ್ನು ಸಮೀಪಿಸುತ್ತಿದೆ ಎಂದು ತಿಳಿದು ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾರತ ವಿಶ್ವದಲ್ಲಿ ಅಗ್ರಸ್ಥಾನವನ್ನು ಪಡೆಯುವಂತೆ ಮಾಡುತ್ತಾರೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.