ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 5 ನೇ ಅವಧಿಗೆ ಸಂಸತ್ ಚುನಾವಣೆಯಲ್ಲಿ ಗೆದ್ದಿದೆ.
ರಾಷ್ಟ್ರೀಯ ಚುನಾವಣೆಯಲ್ಲಿ ಬಹುಮತವನ್ನು ಪಡೆದುಕೊಂಡು ಮತ್ತೆ ಅಧಿಕಾರದ ಗದ್ದುಗೆ ಏರುತ್ತಿದೆ.
ಇಲ್ಲಿಯವರೆಗೆ 299 ಸ್ಥಾನಗಳ ಪೈಕಿ 224 ಸ್ಥಾನಗಳಿಗೆ ಫಲಿತಾಂಶ ಪ್ರಕಟವಾಗಿದೆ. ಅವಾಮಿ ಲೀಗ್ 165 ಸ್ಥಾನಗಳನ್ನು ಗೆದ್ದರೆ, ಜಾತಿಯಾ ಪಕ್ಷದ ಒಂಬತ್ತು ಅಭ್ಯರ್ಥಿಗಳು, 49 ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರ ಪಕ್ಷಗಳ ಒಬ್ಬ ಅಭ್ಯರ್ಥಿ ಗೆದ್ದಿದ್ದಾರೆ.
ಉಳಿದ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಆ ಸ್ಥಾನಗಳ ಫಲಿತಾಂಶ ಹೊರಬೀಳಲಿದೆ.
ಅಮೋಘ ಗೆಲುವಿನೊಂದಿಗೆ, ಅವಾಮಿ ಲೀಗ್ ಅಧ್ಯಕ್ಷೆ ಮತ್ತು ಹಾಲಿ ಪ್ರಧಾನಿ ಶೇಖ್ ಹಸೀನಾ, ಸತತ ನಾಲ್ಕನೇ ಅವಧಿಗೆ ಮತ್ತು ಒಟ್ಟು ಐದನೇ ಅವಧಿಗೆ ಸರ್ಕಾರ ರಚಿಸಲಿದ್ದಾರೆ. ಅವರು ಗೋಪಾಲಗಂಜ್-3 ಕ್ಷೇತ್ರವನ್ನು ಭಾರಿ ಅಂತರದಿಂದ ಗೆದ್ದಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಯಾವುದೇ ವಿಜಯೋತ್ಸವ ಮೆರವಣಿಗೆ ನಡೆಸದಂತೆ ಹಸೀನಾ ತಮ್ಮ ಪಕ್ಷದವರಿಗೆ ಸೂಚನೆ ನೀಡಿದ್ದಾರೆ.
ಚುನಾವಣೆಗೆ ಮುನ್ನ ಮತ್ತು ಚುನಾವಣೆ ವೇಳೆ ಹಿಂಸಾಚಾರದ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಭಾರೀ ಮುನ್ನೆಚ್ಚರಿಕೆ ವಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.