ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ದ್ವೀಪಗಳಿಗೆ ಭೇಟಿ ನೀಡಿದ ನಂತರ ಮಾಲ್ಡೀವ್ಸ್ ಮಂತ್ರಿಗಳು ನೀಡಿದ ಅವಹೇಳನಕಾರಿ ಹೇಳಿಕೆಗಳು ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿದೆ. ಈ ನಡುವೆಯೇ ಭಾರತದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯು ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ.
“ಡಿಸಿಲೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ನಾವು ಕಳೆದ ವರ್ಷ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೆವು. ಇಸ್ರೇಲ್ ನಾಳೆ ಈ ಯೋಜನೆಯ ಕೆಲಸವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಲಕ್ಷದ್ವೀಪಗಳ ವಿಹಂಗಮ ನೀರೊಳಗಿನ ಸೌಂದರ್ಯವನ್ನು ಇನ್ನೂ ವೀಕ್ಷಿಸಲು ಸಾಧ್ಯವಾಗದವರಿಗೆ ಈ ದ್ವೀಪದ ಮೋಡಿಮಾಡುವ ಆಕರ್ಷಣೆಯನ್ನು ತೋರಿಸುವ ಕೆಲವು ಚಿತ್ರಗಳು ಇಲ್ಲಿಬೆ” ಎಂದು ಇಸ್ರೇಲಿ ರಾಯಭಾರ ಕಚೇರಿ X ಪೋಸ್ಟ್ ಮಾಡಿ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.
ಈ ನಡುವೆ, ಭಾರತದಲ್ಲಿರುವ ಮಾಲ್ಡೀವ್ಸ್ ರಾಯಭಾರಿಗೆ ಸೋಮವಾರ ವಿದೇಶಾಂಗ ಸಚಿವಾಲಯ ಸಮನ್ಸ್ ನೀಡಿದ್ದು, ಮಾಲ್ಡೀವ್ಸ್ನ ಹಲವಾರು ಸಚಿವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಮೋದಿ ವಿರುದ್ಧದ ಟೀಕೆಗಳ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ.
We were in #Lakshadweep last year upon the federal government's request to initiate the desalination program.
Israel is ready to commence working on this project tomorrow.
For those who are yet to witness the pristine and majestic underwater beauty of #lakshadweepislands, here… pic.twitter.com/bmfDWdFMEq
— Israel in India (@IsraelinIndia) January 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.