ಉತ್ತರಾಕಾಶಿ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ, ಉತ್ತರಾಖಂಡ ಸರ್ಕಾರವು 9 ದಿನಗಳ ಉತ್ಸವವನ್ನು ಆಚರಿಸಲು ಸಜ್ಜಾಗಿದೆ. ಉತ್ತರಾಖಂಡದಲ್ಲಿ ಜನವರಿ 14 ರ ಉತ್ತರಾಯಣದಿಂದ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠೆಯವರೆಗೆ ಸತತ ಒಂಬತ್ತು ದಿನಗಳ ಕಾಲ ಸಾಂಸ್ಕೃತಿಕ ಉತ್ಸವಗಳನ್ನು ಆಚರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಜರುಗಲಿದೆ.
ಉತ್ತರಾಖಂಡ ಸರ್ಕಾರ ಸೋಮವಾರ ಈ ಬಗ್ಗೆ ಆದೇಶ ಹೊರಡಿಸಿದೆ.
”ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸುವ ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಕಲಶ ಯಾತ್ರೆ ಮತ್ತು ಸ್ತಬ್ಧಚಿತ್ರಗಳನ್ನು ಆಯೋಜಿಸಬೇಕು, ಇದರಲ್ಲಿ ಮಹಿಳಾ ಮಂಗಳ ದಳ, ಯುವಕ ಮಂಗಲ ದಳ ಮತ್ತು ಸ್ವಸಹಾಯ ಗುಂಪುಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದಿದೆ.
‘ರಾಜ್ಯದ ಪ್ರಮುಖ ದೇವಾಲಯಗಳು ಮತ್ತು ಘಾಟ್ಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ದೀಪೋತ್ಸವ ಮತ್ತು ಆರತಿಯನ್ನು ಆಯೋಜಿಸಬೇಕು. ಧಾರ್ಮಿಕ ಸ್ಥಳಗಳಲ್ಲಿ ರಾಮಚರಿತಮಾನಸ ಪಾರಾಯಣ, ಭಜನೆ-ಕೀರ್ತನೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.