ನವದೆಹಲಿ: ಗಾಜಿಯಾಬಾದ್ ಹೆಸರನ್ನು ಬದಲಾಯಿಸಬೇಕೆಂಬ ಹಳೆಯ ಬೇಡಿಕೆ ಮತ್ತೆ ಜೀವ ಪಡೆದುಕೊಂಡಿದೆ. ಇದೀಗ ಪುರಸಭೆಯ ಆಡಳಿತ ಮಂಡಳಿ ಸಭೆಯಲ್ಲಿ ಗಂಭೀರವಾಗಿ ಈ ಬಗ್ಗೆ ಚರ್ಚಿಸಲಾಗಿದೆ. ಮೊಟ್ಟಮೊದಲ ಬಾರಿಗೆ ಪುರಸಭೆಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನು ಸೇರಿಸಲಾಗಿದೆ.
ಅಲ್ಲದೇ ಗಾಜಿಯಾಬಾದ್ಗೆ ಬೇರೆ ಯಾವ ಹೆಸರಿಡಬೇಕು ಎಂಬ ಆಯ್ಕೆಗಳನ್ನು ಕೂಡ ಮುಂದಿಡಲಾಗಿದೆ. ಗಜನಗರ ಮತ್ತು ಹರಂಡಿ ನಗರ ಮುಂಚೂಣಿಯಲ್ಲಿರುವ ಹೆಸರುಗಳು. ಎನ್ಸಿಆರ್ನ ಈ ಜಿಲ್ಲೆಯ ಹೆಸರನ್ನು ಬದಲಾಯಿಸಲು ಪುರಸಭೆ ಬಿಜೆಪಿ ಕೌನ್ಸಿಲರ್ ಪ್ರಸ್ತಾಪಿಸಿದ್ದಾರೆ. ಇದನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಮತ್ತು ಈ ಪ್ರಸ್ತಾಪವನ್ನು ಮುಂದಕ್ಕೆ ಕೊಂಡೊಯ್ಯಬಹುದು ಎಂಬ ನಿರೀಕ್ಷೆ ದಟ್ಟವಾಗಿದೆ.
ಪ್ರಸ್ತಾವನೆಗೆ ಮಂಡಳಿ ಒಪ್ಪಿಗೆ ನೀಡಿದ ನಂತರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಮೇಯರ್ ಸುನಿತಾ ದಯಾಳ್ ತಿಳಿಸಿದ್ದಾರೆ. ಆ ಬಳಿಕ ಅಂತಿಮ ಅನುಮೋದನೆಗಾಗಿ ಕೇಂದ್ರ ಸರ್ಕಾರದ ಮೊರೆ ಹೋಗಲಾಗುತ್ತದೆ. ಗಾಜಿಯಾಬಾದ್ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸಂಘಟನೆಗಳು ಬಹಳ ದಿನಗಳಿಂದ ಒತ್ತಾಯಿಸುತ್ತಲೇ ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.