ನವದೆಹಲಿ: ಅಲಿಘಢ ಮುಸ್ಲಿಂ ವಿಶ್ವವಿದ್ಯಾನಿಲಯದ “ರಾಷ್ಟ್ರೀಯ ಸ್ವರೂಪ” ವನ್ನು ಗಮನಿಸಿದರೆ ಅದು ಅಲ್ಪಸಂಖ್ಯಾತ ಸಂಸ್ಥೆಯಾಗಲು ಸಾಧ್ಯವಿಲ್ಲ ಎಂದು ಕೇಂದ್ರವು ಮಂಗಳವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲ್ಪಟ್ಟ ಯಾವುದೇ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಾಗಲು ಸಾಧ್ಯವಿಲ್ಲದ ಕಾರಣ AMU ಯಾವುದೇ ನಿರ್ದಿಷ್ಟ ಧರ್ಮ ಅಥವಾ ಧಾರ್ಮಿಕ ಪಂಗಡದ ವಿಶ್ವವಿದ್ಯಾಲಯವಲ್ಲ ಮತ್ತು ಹಾಗೆ ಆಗಲೂ ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದೆ.
ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಲಿಖಿತ ಸಲ್ಲಿಕೆಯಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸ್ವಾತಂತ್ರ್ಯ ಪೂರ್ವದಲ್ಲಿಯೂ ವಿಶ್ವವಿದ್ಯಾಲಯವು ಸದಾ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಉಳಿದಿತ್ತು ಎಂದು ಹೇಳಿದರು. ವಿಶ್ವವಿದ್ಯಾನಿಲಯವನ್ನು 1875 ರಲ್ಲಿ ಸ್ಥಾಪಿಸಲಾಯಿತು.
“ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯವು (AMU) ಒಂದು ರಾಷ್ಟ್ರೀಯ ಸ್ವರೂಪದ ಸಂಸ್ಥೆಯಾಗಿದೆ. ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದ ಸ್ಥಾಪನೆಯ ದಾಖಲೆಗಳ ಸಮೀಕ್ಷೆ ಮತ್ತು ಆಗ ಅಸ್ತಿತ್ವದಲ್ಲಿದ್ದ ಶಾಸಕಾಂಗ ಸ್ಥಾನವೂ ಸಹ ಇದನ್ನು ಸ್ಪಷ್ಟಪಡಿಸುತ್ತದೆ. ಎಎಂಯು ಸದಾ ರಾಷ್ಟ್ರೀಯ ಸ್ವರೂಪವನ್ನು ಹೊಂದಿರುವ ಸಂಸ್ಥೆಯಾಗಿ ಉಳಿದಿದೆ” ಎಂದು ಕೇಂದ್ರ ಸುಪ್ರೀಂಗೆ ಹೇಳಿದೆ.
ಸಂವಿಧಾನ ಸಭೆಯಲ್ಲಿನ ಚರ್ಚೆಗಳನ್ನು ಉಲ್ಲೇಖಿಸಿರುವ ಕೇಂದ್ರ, ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿರುವ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತವಲ್ಲದ ವಿಶ್ವವಿದ್ಯಾಲಯವಾಗಿರಬೇಕು ಎಂಬುದು ಸ್ಪಷ್ಟವಾಗಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.