ಗಾಂಧಿನಗರ: ಮುಂದಿನ 25 ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿಯೊಂದಿಗೆ ಕೆಲಸ ಮಾಡುತ್ತಿದೆ. ಮುಂಬರುವ 25 ವರ್ಷಗಳು ಭಾರತದ ಅಮೃತ ಕಾಲ ಎಂದು ಗಾಂಧಿನಗರದಲ್ಲಿ ಬುಧವಾರ ನಡೆದ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಭಾರತ ಸ್ವಾತಂತ್ರ್ಯ ಪಡೆದು 75 ವರ್ಷ ಪೂರೈಸಿದೆ. ಈಗ ಭಾರತವು ಮುಂದಿನ 25 ವರ್ಷಗಳ ಗುರಿಯನ್ನು ಸಾಧಿಸಲು ಶ್ರಮಿಸುತ್ತಿದೆ. 100ನೇ ಸ್ವಾತಂತ್ರ್ಯೋತ್ಸವ ಆಚರಿಸುವ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ. ಆದ್ದರಿಂದ, ಈ 25 ವರ್ಷಗಳ ಅವಧಿಯು ಭಾರತದ ಅಮೃತ ಕಾಲವಾಗಿದೆ ಎಂದರು.
ಅಮೃತ ಕಾಲದಲ್ಲಿ ಇದು ಮೊದಲ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯಾಗಿದೆ ಮತ್ತು ಇದು ಹೆಚ್ಚು ಮಹತ್ವದ್ದಾಗಿದೆ . ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ 100 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಈ ಅಭಿವೃದ್ಧಿ ಪಯಣದಲ್ಲಿ ನಿರ್ಣಾಯಕ ಪಾಲುದಾರರಾಗಿದ್ದಾರೆ ಎಂದು ಮೋದಿ ಹೇಳಿದರು.
2003 ರಲ್ಲಿ ಮೋದಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಾರಂಭವಾದ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯು ರಾಜ್ಯದ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದು. ಹತ್ತನೇ ಶೃಂಗಸಭೆ ಆವೃತ್ತಿಯು ‘ಗೇಟ್ವೇ ಟು ದಿ ಫ್ಯೂಚರ್’ ವಿಷಯದೊಂದಿಗೆ ಇಂದಿನಿಂದ ನಡೆಯುತ್ತಿದೆ. .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.