ನವದೆಹಲಿ: ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿನ್ನೆಡೆಯಾಗಿದೆ. ಮಣಿಪಾಲ ಸರ್ಕಾರವು ಇಂಫಾಲ್ ಪೂರ್ವದ ಹಪ್ತಾ ಕಾಂಗ್ಜೆಬುಂಗ್ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸಲು ಬುಧವಾರ ಅನುಮತಿ ನಿರಾಕರಿಸಿದೆ.
ಮಣಿಪುರದ ಸಂಘರ್ಷ ಪೀಡಿತ ಪ್ರತಿಕೂಲ ಪರಿಸ್ಥಿತಿಯಿಂದಾಗಿ ಯಾತ್ರೆಗೆ ಅವಕಾಶ ನಿರಾಕರಿಸಲಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೇಶಾಮ್ ಮೇಘಚಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಸಿಎಂ ಬಿರೇನ್ ಸಿಂಗ್ ಅವರು ಮಣಿಪುರದ ಪ್ರಸ್ತುತ ಪ್ರತಿಕೂಲ ಪರಿಸ್ಥಿತಿಯು ಯಾತ್ರೆ ಪ್ರಾರಂಭಿಸಲು ತಮ್ಮ ಮನವಿಯನ್ನು ನಿರಾಕರಿಸಲು ಕಾರಣವೆಂದು ಉಲ್ಲೇಖಿಸಿದ್ದಾರೆ” ಎಂದಿದ್ದಾರೆ.
ಹೀಗಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇತೃತ್ವದ ಪಕ್ಷವು ಖಾಸಗಿ ಒಡೆತನದ ಸ್ಥಳದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ ಎಂದು ಅವರು ಹೇಳಿದರು.
ಜನವರಿ 14 ರಂದು ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅರ್ಜುನ್ ಖರ್ಗೆ ಅವರು ಉದ್ಘಾಟಿಸಲಿರುವ 66 ದಿನಗಳ ಪಾದಯಾತ್ರೆಗೆ ಅನುಮೋದನೆ ಕೋರಿ ಜನವರಿ 2 ರಂದು ಪಕ್ಷವು ಔಪಚಾರಿಕವಾಗಿ ಅರ್ಜಿ ಸಲ್ಲಿಸಿತ್ತು. ಆದರೆ ಅರ್ಜಿಗೆ ಯಾವುದೇ ಸ್ಪಂದನೆ ಸಿಗದ ಕಾರಣ ಸಿಎಂ ಅವರನ್ನು ಭೇಟಿ ಮಾಡಿ ಅನುಮತಿ ಕೋರಲಾಯಿತು. ಆದರೆ ಪರಿಸ್ಥಿತಿ ಸರಿಯಿಲ್ಲ ಎಂಬ ಕಾರಣ ನೀಡಿ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಮೇಘಚಂದ್ರ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.