ಅಹ್ಮದಾಬಾದ್: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ಜರುಗಲಿರುವ ಹಿನ್ನೆಲೆಯಲ್ಲಿ ಭಕ್ತರಲ್ಲಿ ಉತ್ಸಾಹವು ಗರಿಗೆದರಿದೆ. ಪವಿತ್ರ ನಗರವಾದ ಅಯೋಧ್ಯೆಗೆ ಭೇಟಿ ನೀಡಲು ಕಾತರರಾಗಿದ್ದಾರೆ. ಗುಜರಾತ್ನ ಅಹಮದಾಬಾದ್ನಿಂದ ಮೊದಲ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಟೇಕಾಫ್ ಆಗಿದೆ.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಭಕ್ತರು ಅಯೋಧ್ಯೆಗೆ ಪ್ರಯಾಣವನ್ನು ಸಂಭ್ರಮಿಸುತ್ತಿರುವ ವೀಡಿಯೊ ವೈರಲ್ ಆಗಿದ್ದು, ಭಕ್ತರ ಉತ್ಸಾಹವನ್ನು ಪ್ರತಿಬಿಂಬಿಸುತ್ತಿದೆ. ಭಕ್ತರು ಶ್ರೀರಾಮನ ವೇಷ ಧರಿಸಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಈ ವೇಳೆ ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಕೂಡ ಅಯೋಧ್ಯೆ ಮೊದಲ ಹಾರಾಟವನ್ನು ಸಂಭ್ರಮಿಸಲು ಕೇಕ್ ಕತ್ತರಿಸುತ್ತಿರುವ ದೃಶ್ಯವೂ ಕಂಡುಬಂದಿದೆ. ಭಕ್ತರು ಕೂಡ “ರಾಮ್ ಲಕ್ಷ್ಮಣ್ ಜಾನಕಿ, ಜೈ ಕನ್ಹಯ್ಯಾ ಲಾಲ್ ಕಿ” ಎಂದು ಘೋಷಣೆ ಕೂಗಿದ್ದಾರೆ. ಅಹಮದಾಬಾದ್ನಿಂದ ಅಯೋಧ್ಯೆಗೆ ಮೊದಲ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕಾಗಿ ಶ್ಲಾಘನೆಯ ಸಂಕೇತವಾಗಿ ಅವರಿಗೆ ಭಗವಾನ್ ರಾಮನ ಪ್ರತಿಮೆಯನ್ನು ಸಹ ನೀಡಲಾಯಿತು. ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 09:10 ಕ್ಕೆ ಹೊರಟು 11:00 AM ಕ್ಕೆ ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ.
#WATCH | Gujarat: As the first flight for Ayodhya leaves from Ahmedabad, passengers arrive at the airport dressed as Lord Ram, Lakshman, Sita, and Hanuman. pic.twitter.com/3EviO4mxzV
— ANI (@ANI) January 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.