ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸ್ವಚ್ಛತಾ ಸಮೀಕ್ಷೆ-2023 ಪ್ರಶಸ್ತಿ ಪ್ರದಾನಿಸಿದರು. ಸೂರತ್ ಮತ್ತು ಇಂಧೋರ್ ದೇಶದ ಸ್ವಚ್ಛ ನಗರ ಪ್ರಶಸ್ತಿಯನ್ನು ಪಡೆದುಕೊಂಡಿವೆ. ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ನಗರ ವಿಭಾಗದಲ್ಲಿ ಇವುಗಳು ಪ್ರಶಸ್ತಿಯನ್ನು ಸ್ವೀಕರಿಸಿವೆ.
ಇಂದೋರ್ ಸತತ 7ನೇ ಬಾರಿಗೆ ಈ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದೇ ವಿಭಾಗದಲ್ಲಿ ನವಿ ಮುಂಬೈ ತೃತೀಯ ಸ್ಥಾನ ಪಡೆಯಿತು.
ನವದೆಹಲಿಯ ಭಾರತ್ ಮಂಟಪದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಅಧಿಕಾರಿಗಳ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ‘ಸ್ವಚ್ಛ ಸರ್ವೇಕ್ಷಣ್ -2023 ಪ್ರಶಸ್ತಿಗಳನ್ನು’ ಪ್ರದಾನ ಮಾಡಿದರು.
ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯ ವಿಭಾಗದಲ್ಲಿ ಮಹಾರಾಷ್ಟ್ರದ ಸಾಸ್ವಾದ್, ಛತ್ತೀಸ್ಗಢದ ಪಟಾನ್ ಮತ್ತು ಮಹಾರಾಷ್ಟ್ರದ ಲೋನಾವಾಲಾ ಮೊದಲ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ. ರಾಜ್ಯ ವಿಭಾಗದಲ್ಲಿ ಮಹಾರಾಷ್ಟ್ರ ಪ್ರಥಮ, ಮಧ್ಯಪ್ರದೇಶ ದ್ವಿತೀಯ ಮತ್ತು ಛತ್ತೀಸ್ಗಢ ಮೂರನೇ ಸ್ವಚ್ಛ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ವಾರಣಾಸಿ ಮತ್ತು ಪ್ರಯಾಗ್ರಾಜ್ ಸ್ವಚ್ಛ ಗಂಗಾ ಪಟ್ಟಣಗಳಲ್ಲಿ ಅಗ್ರಸ್ಥಾನ ಗಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.