ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರವು ಸ್ವಾಭಿಮಾನದ ಪ್ರತೀಕ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು.
ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ಬಿಜೆಪಿ ಕಾರ್ಯಕರ್ತರು, ರಾಮಭಕ್ತರು ಎಲ್ಲ ದೇಗುಲಗಳು, ಮಂದಿರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ ಎಂದರಲ್ಲದೆ, ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.
ಅಯೋಧ್ಯೆ ಶ್ರೀರಾಮಮಂದಿರ ಪುನರ್ ನಿರ್ಮಾಣ ಆಗಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಹಬ್ಬದ ವಾತಾರವಣ ಇದೆ ಎಂದು ತಿಳಿಸಿದರು.
500 ವರ್ಷಗಳ ಕಾಲ ನಾವು ಅನ್ಯಾಯಕ್ಕೆ ಒಳಗಾಗಿದ್ದೆವು. ಎಲ್ಲ ಭಾರತೀಯರು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಇತರ ಪಕ್ಷಗಳು ತಮ್ಮ ಕಾರ್ಯಕ್ರಮಗಳನ್ನು ಜನವರಿ 22ರ ಬಳಿಕ ಮಾಡಿದ್ದರೆ ಚೆನ್ನಾಗಿತ್ತು. ಇದಕ್ಕೆ ಜನತೆ ಸೂಕ್ತ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಭಾಷೆ ಮೇಲೆ ಹಿಡಿತ ಇರಬೇಕು. ಸಮಾಧಾನದಿಂದ ಎಲ್ಲರಿಗೂ ಗೌರವ ನೀಡುವುದು ನಮ್ಮ ಸಂಸ್ಕೃತಿ ಆಗಿರಬೇಕು. ತಪ್ಪಾದಾಗ ಅದನ್ನು ಸರಿಪಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಮೊದಲು ಏಕವಚನ ಬಳಕೆಗೆ ಸಂಬಂಧಿಸಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಕೇಸು ಹಾಕಿಸಿ ನಂತರ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕೇಸು ಹಾಕಲು ಹೇಳಬೇಕು ಎಂದು ಇದೇವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ. ನಾರಾಯಣಗೌಡ, ಕಾರ್ಯಕರ್ತರು, ರಾಮಭಕ್ತರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.