ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ನಿರೀಕ್ಷೆಯಿದೆ.
“ನಾನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಇಷ್ಟು ವರ್ಷಗಳಿಂದ ನೀಡಿದ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.
ಮುಂಬೈನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಲಿಂದ್ ದಿಯೋರಾ, “ಅಭಿವೃದ್ಧಿಯ ಪಥದಲ್ಲಿ” ನಡೆಯಲು ಕಾಂಗ್ರೆಸ್ ತೊರೆದಿದ್ದೇನೆ ಎಂದು ಹೇಳಿದ್ದಾರೆ.
Today marks the conclusion of a significant chapter in my political journey. I have tendered my resignation from the primary membership of @INCIndia, ending my family’s 55-year relationship with the party.
I am grateful to all leaders, colleagues & karyakartas for their…
— Milind Deora | मिलिंद देवरा ☮️ (@milinddeora) January 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.