ನವದೆಹಲಿ: ಜನರು ತಮ್ಮ ಸುತ್ತಮುತ್ತಲಿನ ಮತ್ತು ಧಾರ್ಮಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿಯವರ ಸ್ವಚ್ಛ ತೀರ್ಥ ಅಭಿಯಾನದಲ್ಲಿ ಭಾಗವಹಿಸಿದ ಠಾಕೂರ್ ಅವರು ಇಂದು ನವದೆಹಲಿಯ ಕನ್ನಾಟ್ ಪ್ಲೇಸ್ನ ಹನುಮಾನ್ ಮಂದಿರ ಸಂಕೀರ್ಣದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಿದರು.
ಅಯೋಧ್ಯೆಯಲ್ಲಿ ರಾಮಲಾಲಾ ಪ್ರತಿಷ್ಠಾಪನೆಯ ಪೂರ್ವಭಾವಿಯಾಗಿ, ಭಕ್ತಿಯ ಅಲೆಯು ಭಾರತದಾದ್ಯಂತ ಹರಡಿದೆ. ಮುಂದೆಯೂ ದೇಶದಲ್ಲಿ ಭ್ರಾತೃತ್ವ, ಭಕ್ತಿ, ಸೌಹಾರ್ದ ಭಾವನೆಗಳು ಹೆಚ್ಚಾಗಲಿ ಎಂದು ಹಾರೈಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅನುರಾಗ್ ಸಿಂಗ್ ಠಾಕೂರ್, ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತೀವ್ರವಾಗಿ ವಾಗ್ದಾಳಿ ನಡೆಸಿದರು. ಆಮ್ ಆದ್ಮಿ ಪಕ್ಷದ ಹಲವು ನಾಯಕರು ಜೈಲಿನಲ್ಲಿದ್ದಾರೆ. ಹಲವು ಬಾರಿ ಸಮನ್ಸ್ ನೀಡಿದರೂ ಜಾರಿ ನಿರ್ದೇಶನಾಲಯದ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಾಗಿಲ್ಲ ಎಂದು ಟೀಕಿಸಿದರು. ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಲು ಹಲವು ವಿರೋಧ ಪಕ್ಷಗಳ ನಾಯಕರು ಇಚ್ಛೆ ತೋರುತ್ತಿಲ್ಲ ಎಂದು ಸಚಿವರು ಟೀಕಿಸಿದರು.
ಹನುಮಾನ್ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸತೀಶ್ ಉಪಾಧ್ಯಾಯ ಕೂಡ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.