ನವದೆಹಲಿ: ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿಇನ್ನು ಕೆಲವು ದಿನಗಳ ಕಾಲ ತೀವ್ರ ಚಳಿಯ ದಿನಗಳು ಮುಂದುವರಿಯುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ವಾತಾವರಣ ಚಳಿಯಿಂದ ತೀವ್ರ ಚಳಿಗೆ ಮಾರ್ಪಾಗಿದ್ದು, ಇದು ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಪಂಜಾಬ್, ಹರಿಯಾಣ ಮತ್ತು ದೆಹಲಿಯ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 5 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇಂದು ಹರಿಯಾಣದ ಹಿಸಾರ್ನಲ್ಲಿ ಕನಿಷ್ಠ ತಾಪಮಾನ 1.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಮಧ್ಯಪ್ರದೇಶದಲ್ಲಿ ರಾತ್ರಿ ಮತ್ತು ಬೆಳಿಗ್ಗೆ ಕೆಲವು ಗಂಟೆಗಳ ಕಾಲ ದಟ್ಟವಾದ ಮಂಜು ವಾತಾವರಣವು ಇರುತ್ತದೆ ಎಂದು IMD ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.