ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೇರಳದ ಗುರುವಾಯೂರಿನ ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪನ್ನು ಧರಿಸಿ ಅವರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಫೋಟೋ ಎಲ್ಲರ ಗಮನ ಸೆಳೆದಿದೆ..
ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ಆಗಮಿಸಿದ ಪ್ರಧಾನಿ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ಅವರನ್ನು ಸ್ವಾಗತಿಸಲು ಭಾರೀ ಸಂಖ್ಯೆಯ ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಜಮಾಯಿಸಿದ್ದರು. ಎಲ್ಲಾ ವಯಸ್ಸಿನ ಜನರು ಹೆಲಿಪ್ಯಾಡ್ನಲ್ಲಿ ಬಿಜೆಪಿ ಧ್ವಜಗಳನ್ನು ಬೀಸುತ್ತಾ ಮತ್ತು ಪಕ್ಷದ ಬಣ್ಣದ ಕ್ಯಾಪ್ಗಳನ್ನು ಧರಿಸಿ ಮೋದಿ ಅವರನ್ನು ಸ್ವಾಗತಿಸಿದರು.
ಇಂದು ಕೇರಳದ ಕೊಚ್ಚಿಯಲ್ಲಿರುವ ವೆಲ್ಲಿಂಗ್ಡನ್ ದ್ವೀಪದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 4,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ಯೋಜನೆಗಳಲ್ಲಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಹೊಸ ಡ್ರೈ ಡಾಕ್ ಸೌಲಭ್ಯ, ವೆಲ್ಲಿಂಗ್ಡನ್ ದ್ವೀಪದಲ್ಲಿರುವ ಕೊಚ್ಚಿನ್ ಶಿಪ್ಯಾರ್ಡ್ನ ಅಂತಾರಾಷ್ಟ್ರೀಯ ಹಡಗು ದುರಸ್ತಿ ಸೌಲಭ್ಯ ಮತ್ತು ಪುತ್ತುವೈಪೀನ್ನಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಶನ್ನ ಎಲ್ಪಿಜಿ ಆಮದು ಟರ್ಮಿನಲ್ ಸೇರಿವೆ.
ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ 1799 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನ್ಯೂ ಡ್ರೈ ಡಾಕ್ ಸೌಲಭ್ಯವು ದೇಶದ ಅತಿದೊಡ್ಡ ಡ್ರೈ ಡಾಕ್ ಆಗಿದೆ. ಇದು LNG ಕ್ಯಾರಿಯರ್ಗಳು, ದೊಡ್ಡ ಹಡಗುಗಳು ಮತ್ತು ತೈಲ ರಿಗ್ಗಳಿಗೆ ಅವಕಾಶ ಕಲ್ಪಿಸುತ್ತದೆ.
600 ಟನ್ ಗ್ಯಾಂಟ್ರಿ ಕ್ರೇನ್ ಹೊಂದಿದ ಡ್ಯುಯಲ್ ಪರ್ಪಸ್ ಡ್ರೈ ಡಾಕ್ ಅನ್ನು ಹಡಗು ನಿರ್ಮಾಣ ಮತ್ತು ಹಡಗು ರಿಪೇರಿ ಎರಡಕ್ಕೂ ಬಳಸಿಕೊಳ್ಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.