ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 19ರಂದು ರಾಜ್ಯ ಮಟ್ಟದ ಎಸ್ಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಸಮಾಜ ಸೇರಿ ಸುಮಾರು 52 ಎಸ್ಟಿ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸಿ.ಟಿ.ರವಿ, ರಮೇಶ್ ಜಾರಕಿಹೊಳಿ, ಬಿ.ಶ್ರೀರಾಮುಲು ಮತ್ತಿತರರು ಭಾಗವಹಿಸುತ್ತಾರೆ. ಸ್ಥಳೀಯ ಮುಖಂಡರೂ ಪಾಲ್ಗೊಳ್ಳುವರು ಎಂದು ವಿವರಿಸಿದರು.
ಅಯೋಧ್ಯೆಯ ವಿಮಾನನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿಜೀ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಾಲ್ಮೀಕಿ ಸಮಾಜದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು. ಪಕ್ಷವು ನನಗೆ ಈ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.