ಅಯೋಧ್ಯಾ: 500 ವರ್ಷಗಳ ಕಾಯುವಿಕೆ ಅಂತ್ಯಗೊಂಡಿದೆ. ಅಯೋಧ್ಯೆಯ ಪುಣ್ಯಭೂಮಿಯಲ್ಲಿ ರಾಮ ಲಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಟೆಯನ್ನು ನೆರವೇರಿಸಿದ್ದಾರೆ. ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹ ದೇಗುಲದಲ್ಲಿ ವಿರಾಜಮಾನವಾಗಿದೆ.
ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯದ ಗರ್ಭಗುಡಿಯಲ್ಲಿ ಹಲವಾರು ಸಂತರ ಜೊತೆ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಉಡುಪಿ ಪೇಜಾವರ ಮಠದ ಸ್ವಾಮೀಜಿಗಳು ಕೂಡ ಉಪಸ್ಥಿತರಿದ್ದರು.
ಹೊಸ ದೇವಾಲಯದ ನೆಲ ಮಹಡಿಯಲ್ಲಿರುವ ರಾಮ್ ಲಲಾ ವಿಗ್ರಹವು ಐದು ವರ್ಷದ ರಾಮನನ್ನು ಪ್ರತಿನಿಧಿಸುತ್ತದೆ. ಇನ್ನೂ ನಿರ್ಮಾಣವಾಗಬೇಕಿರುವ ದೇವಾಲಯದ ಮೊದಲ ಮಹಡಿಯಲ್ಲಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಸಹಿತ ರಾಜಾರಾಮನ ವಿಗ್ರಹವಿರಲಿದೆ.
ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಸೇನಾ ಹೆಲಿಕಾಫ್ಟರ್ಗಳು ಮಂದಿರ ಮೇಲೆಯಿಂದ ಪುಷ್ಪಾರ್ಚನೆ ಮಾಡಿದವು. ಈ ವಿಹಂಗಮ ನೋಟ ಭಕ್ತರನ್ನು ಸೆಳೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.