ನವದೆಹಲಿ: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. 2008ರಿಂದ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಮೋದಿಯವರು ಹೆಣ್ಣುಮಕ್ಕಳ ಸಾಧನೆಯನ್ನು ಕೊಂಡಾಡಿದ್ದಾರೆ.
“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ನಾವು ಹೆಣ್ಣು ಮಗುವಿನ ಅದಮ್ಯ ಮನೋಭಾವ ಮತ್ತು ಸಾಧನೆಗಳಿಗೆ ವಂದಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿನ ಪ್ರತಿ ಹೆಣ್ಣು ಮಗುವಿನ ಶ್ರೀಮಂತ ಸಾಮರ್ಥ್ಯವನ್ನು ನಾವು ಗುರುತಿಸುತ್ತೇವೆ. ಅವರು ನಮ್ಮ ದೇಶ ಮತ್ತು ಸಮಾಜವನ್ನು ಉತ್ತಮಗೊಳಿಸುವ ಬದಲಾವಣೆಯನ್ನು ಮಾಡುವವರು. ಕಳೆದ ದಶಕದಲ್ಲಿ, ನಮ್ಮ ಸರ್ಕಾರವು ಪ್ರತಿ ಹೆಣ್ಣು ಮಗುವಿಗೆ ಕಲಿಯಲು, ಬೆಳೆಯಲು ಮತ್ತು ಅಭಿವೃದ್ಧಿ ಹೊಂದಲು ಅವಕಾಶವಿರುವ ರಾಷ್ಟ್ರವನ್ನು ನಿರ್ಮಿಸಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಹೆಣ್ಣು ಮಕ್ಕಳ ಬಗೆಗಿನ ತಾರತಮ್ಯದ ಧೋರಣೆಯನ್ನು ಹೋಗಲಾಡಿಸುವುದು, ಲಿಂಗಾನುಪಾತವನ್ನು ದೂರ ಮಾಡುವುದು ಮತ್ತು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವುದು ಈ ದಿನದ ಆಚರಣೆಯ ಹಿಂದಿನ ಉದ್ದೇಶವಾಗಿದೆ.
On National Girl Child Day, we salute the indomitable spirit and accomplishments of the Girl Child. We also recognise the rich potential of every girl child in all sectors. They are change-makers who make our nation and society better. Over the last decade, our government has…
— Narendra Modi (@narendramodi) January 24, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.