ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆದು ಕಾಂಗ್ರೆಸ್ ಅನ್ನು ಸೇರಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಆಗಮಿಸಿದ್ದಾರೆ. ಇಂದು ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕ ಶೆಟ್ಟರ್ ಅವರು ಜೆಪಿ ನಡ್ಡಾ ನೇತೃತ್ವದಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಶೆಟ್ಟರ್ ತಿಳಿಸಿದ್ದಾರೆ.
ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್ಗೆ ಯಡಿಯೂರಪ್ಪ ಅವರಿಗೆ ಆಹ್ವಾನ ಕೊಟ್ಟಿದ್ದರು. ವರಿಷ್ಠರನ್ನ ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು ಎಂದು ಈ ಹಿಂದೆ ಮೂಲಗಳು ತಿಳಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.