ನವದೆಹಲಿ: ಪಶ್ಚಿಮ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 19,100 ಕೋಟಿ ರೂ.ಗೂ ಹೆಚ್ಚು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಮೀಸಲಾದ ಸರಕು ಸಾಗಣೆ ಕಾರಿಡಾರ್ನಲ್ಲಿ (ಡಿಎಫ್ಸಿ) ನ್ಯೂ ಖುರ್ಜಾ ಮತ್ತು ನ್ಯೂ ರೇವಾರಿ ನಡುವೆ 173 ಕಿಮೀ ಉದ್ದದ ಡಬಲ್-ಲೈನ್ ವಿದ್ಯುದ್ದೀಕೃತ ವಿಭಾಗವನ್ನು ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಎರಡು ನಿಲ್ದಾಣಗಳಿಂದ ಸರಕು ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡುವ ಮೂಲಕ ಉದ್ಘಾಟಿಸಿದರು.
ಮಥುರಾ-ಪಲ್ವಾಲ್ ವಿಭಾಗ ಮತ್ತು ಚಿಪಿಯಾನ ಬುಜುರ್ಗ್-ದಾದ್ರಿ ವಿಭಾಗವನ್ನು ಸಂಪರ್ಕಿಸುವ ರೈಲು ಮಾರ್ಗವನ್ನು ಪ್ರಧಾನಿ ಉದ್ಘಾಟಿಸಿದರು. ಈ ಹೊಸ ಮಾರ್ಗಗಳು ರಾಷ್ಟ್ರ ರಾಜಧಾನಿಯ ದಕ್ಷಿಣ-ಪಶ್ಚಿಮ ಮತ್ತು ಪೂರ್ವ ಭಾರತಕ್ಕೆ ರೈಲು ಸಂಪರ್ಕವನ್ನು ಸುಧಾರಿಸುತ್ತದೆ.
ಈ ವೇಳೆ ಮೋದಿ ಅವರು ಅನೇಕ ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು. ಅವರು ಇಂಡಿಯನ್ ಆಯಿಲ್ನ ತುಂಡ್ಲಾ-ಗವಾರಿಯಾ ಪೈಪ್ಲೈನ್ ಅನ್ನು ಉದ್ಘಾಟಿಸಿದರು. ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ 255 ಕಿಮೀ ಉದ್ದದ ಪೈಪ್ಲೈನ್ ಯೋಜನೆಯು ನಿಗದಿತ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ಪೂರ್ಣಗೊಂಡಿದೆ.
ಸುಮಾರು 460 ಕೋಟಿ ವೆಚ್ಚದಲ್ಲಿ ಒಳಚರಂಡಿ ಸಂಸ್ಕರಣಾ ಘಟಕದ ನಿರ್ಮಾಣ ಸೇರಿದಂತೆ ನವೀಕರಿಸಿದ ಮಥುರಾ ಒಳಚರಂಡಿ ಯೋಜನೆಯನ್ನು ಪ್ರಧಾನಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.