ಮಂಡ್ಯ: ಕರ್ನಾಟಕದ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜವನ್ನು ಕೆಳಗಿಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ ಘಟನೆಯ ಈಗ ಭಾರೀ ವಿವಾದ ರಾಜಕೀಯ ಘರ್ಷಣೆ, ಪ್ರತಿಭಟನೆಗೆ ಕಾರಣವಾಗಿದೆ. 108 ಅಡಿ ಎತ್ತರದ ಧ್ವಜಸ್ತಂಭವನ್ನು ನಿರ್ಮಿಸಿ ಹನುಮಾನ್ ಧ್ವಜಾರೋಹಣ ಮಾಡಿದ ಘಟನೆ ಕಳೆದ ವಾರ ನಡೆದಿತ್ತು.
ಉದ್ವಿಗ್ನ ಪರಿಸ್ಥಿತಿಯಿಂದಾಗಿ ಗ್ರಾಮದಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಧ್ವಜಸ್ತಂಭ ಸ್ಥಾಪನೆಗೆ ಗ್ರಾಮ ಪಂಚಾಯಿತಿ ಅನುಮತಿ ನೀಡಿದ್ದರೂ ಅದರ ವಿರುದ್ಧ ದೂರುಗಳು ಬಂದಿದ್ದವು. ಬಳಿಕ ಅಧಿಕಾರಿಗಳು ಹನುಮಾನ್ ಧ್ವಜವನ್ನು ತೆಗೆಯುವಂತೆ ಮನವಿ ಮಾಡಿದ್ದರು. ಆದರೆ ಗ್ರಾಮಸ್ಥರು ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೆಲವು ವ್ಯಕ್ತಿಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ದೊಡ್ಡ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು, ಮತ್ತು ಬಿಜೆಪಿ, ಜೆಡಿ (ಎಸ್), ಮತ್ತು ಬಜರಂಗ ದಳದ ಸದಸ್ಯರು ಗ್ರಾಮಸ್ಥರೊಂದಿಗೆ ಸೇರಿ ತೆಗೆಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಆದರೆ, ಜನವರಿ 28ರ ನಸುಕಿನ ಜಾವ 3 ಗಂಟೆಗೆ ಮಂಡ್ಯ ಗ್ರಾಮಕ್ಕೆ ಮಂಡ್ಯ ಎಸ್ಐ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಆಗಮಿಸಿ ಧ್ವಜಕ್ಕೆ ಯತ್ನಿಸಿದ್ದರು. ಸ್ಥಳಕ್ಕೆ ಆಗಮಿಸಿದ್ದರು. ಈ ವಿಚಾರ ತಿಳಿಯದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿದರು. ಸಿಬ್ಬಂದಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರಾದರೂ ಫಲ ನೀಡಲಿಲ್ಲ. ಕೂಡಲೆ ಗ್ರಾಮದಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಲು. ಇಷ್ಟಾದ ಬಳಿಕ ಹನುಮ ಧ್ವಜವನ್ನು ಪಡೆದರು.
ಘಟನೆಯು ಗ್ರಾಮಸ್ಥರಲ್ಲಿ ಆಕ್ರೋಶವನ್ನು ಹುಟ್ಟು ಹಾಕಿದ್ದು ಭಾರೀ ಪ್ರತಿಭಟನೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.