ನವದೆಹಲಿ: ಯೂನಿಫಾರ್ಮ್ ಸಿವಿಲ್ ಕೋಡ್ (ಯುಸಿಸಿ) ಸಮಿತಿಯು ತನ್ನ ಕೆಲಸವನ್ನು ಪೂರ್ಣಗೊಳಿಸಿದೆ ಮತ್ತು ಅದರ ವರದಿಯನ್ನು ಫೆಬ್ರವರಿ 2 ರಂದು ನೀಡಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಉತ್ತರಾಖಂಡ್ ರಾಜ್ಯದಲ್ಲಿ ಯುಸಿಸಿ ಅನುಷ್ಠಾನದ ಕುರಿತು ಸಿಎಂ ಧಾಮಿ ಮಾತನಾಡಿದ್ದು, 2022ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಭರವಸೆ ನೀಡುವ ಸಂದರ್ಭದಲ್ಲಿ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಪ್ರತಿಜ್ಞೆ ಸ್ವೀಕರಿಸಿ ಯುಸಿಸಿ ಸಮಿತಿಯನ್ನು ರಚಿಸಿದ್ದು, ಸಮಿತಿಯು ತನ್ನ ಕಾರ್ಯವನ್ನು ಪೂರ್ಣಗೊಳಿಸಿದ್ದು, ಫೆಬ್ರವರಿ 2 ರಂದು ನಮಗೆ ವರದಿ ಸಲ್ಲಿಸಲಿದೆ ಎಂದಿದ್ದಾರೆ.
UCC ಸಮಿತಿಯನ್ನು ಮೇ 27, 2022 ರಂದು ರಚಿಸಲಾಗಿದೆ
ಉತ್ತರಾಖಂಡವು ಮೇ 27, 2022 ರಂದು ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಸಮಿತಿಯನ್ನು ರಚಿಸಿತ್ತು. ಉತ್ತರಾಖಂಡದಲ್ಲಿ 2022 ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ UCC ಭರವಸೆ ನೀಡಲಾಗಿತ್ತು.
#WATCH | Dehradun: On the implementation of UCC in the state, Uttarakhand CM Pushkar Singh Dhami says, "While making a promise to the people of the state in the 2022 assembly elections, we had constituted the UCC Committee, taking a pledge to implement the Uniform Civil Code in… pic.twitter.com/JsGhHaiFns
— ANI (@ANI) January 29, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.