ಚಂಡೀಗಢ: ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ವಿಜಯವನ್ನು ದಾಖಲಿಸಿದೆ. ಬಿಜೆಪಿಯ ಮನೋಜ್ ಸೋಂಕರ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಕುಲದೀಪ್ ಕುಮಾರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ. ಇದು ಇಂಡಿ ಒಕ್ಕೂಟದ ವಿರುದ್ಧ ಬಿಜೆಪಿಗೆ ದೊರೆತ ವಿಜಯವಾಗಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎಗೆ ಮರಳಿದ ಬಳಿಕ ವಿರೋಧ ಪಕ್ಷಗಳ ಇಂಡಿ ಒಕ್ಕೂಟ ಮತ್ತು ಎನ್ಡಿಎ ನಡುವಿನ ಮೊದಲ ಚುನಾವಣಾ ಸ್ಪರ್ಧೆ ಇದಾಗಿದ್ದು, ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಬಿಜೆಪಿ ವಿರುದ್ಧವಾಗಿ ಸ್ಪರ್ಧಿಸಿತ್ತು.
ಸೋಂಕರ್ 16 ಮತಗಳನ್ನು ಪಡೆದರೆ, ಕುಮಾರ್ 12 ಮತಗಳನ್ನು ಗಳಿಸಿದರು. ಎಂಟು ಮತಗಳನ್ನು ಅಮಾನ್ಯವೆಂದು ಘೋಷಿಸಿದ್ದರಿಂದ ಫಲಿತಾಂಶವು ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್ಗಳ ಭಾರೀ ಪ್ರತಿಭಟನೆಗೆ ಕಾರಣವಾಯಿತು. ಬಿಜೆಪಿ, 14 ಕೌನ್ಸಿಲರ್ಗಳನ್ನು ಹೊಂದಿದ್ದು, 13 ಕೌನ್ಸಿಲರ್ಗಳನ್ನು ಹೊಂದಿದ್ದ ಎಎಪಿ ಮತ್ತು ಏಳು ಮಂದಿಯನ್ನು ಹೊಂದಿದ್ದ ಕಾಂಗ್ರೆಸ್ ಅನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ.
ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ, ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಂಚನೆ ನಡೆಸಿದೆ ಎಂದು ಆರೋಪಿಸಿದರು ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ತಮ್ಮ ಅತೃಪ್ತಿ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.