ಲಕ್ನೋ: ಅಯೋಧ್ಯೆಯಲ್ಲಿ ಭದ್ರತೆಗಾಗಿ ನಿಯೋಜಿತರಾದ ರಾಜ್ಯ ವಿಶೇಷ ಭದ್ರತಾ ಪಡೆ (ಯುಪಿಎಸ್ಎಸ್ಎಫ್), ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಮತ್ತು ಇತರ ಸಿಬ್ಬಂದಿಗಳಿಗೆ ವಸತಿ ಸೌಕರ್ಯಗಳನ್ನು ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯಲ್ಲಿ ಶಿಕ್ಷಣ ಇಲಾಖೆಯ 18 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ.
”ಕಂದಾಯ ದಾಖಲೆಗಳಿಗೆ ತಿದ್ದುಪಡಿ ತಂದು ವಾರದೊಳಗೆ ಅದರ ಮಾಹಿತಿಯನ್ನು ಸರಕಾರಕ್ಕೆ ನೀಡಲಾಗುವುದು. ಅಯೋಧ್ಯೆ ಸದರ್ ತೆಹಸಿಲ್ನ ಮಲಿಕ್ಪುರ ಮತ್ತು ಗಂಜಾ ಗ್ರಾಮಗಳಲ್ಲಿ ಪ್ರೌಢ ಶಿಕ್ಷಣ ಇಲಾಖೆಗೆ ಸೇರಿದ ಲಭ್ಯವಿರುವ ಜಮೀನುಗಳನ್ನು ಶಿಕ್ಷಣ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದ ನಂತರ ಗೃಹ ಇಲಾಖೆಗೆ ವರ್ಗಾಯಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಸದ್ಯ, ರಾಮ ಮಂದಿರದ ಭದ್ರತೆಗೆ ನಿಯೋಜಿಸಲಾದ ಸಿಬ್ಬಂದಿಗೆ ಯಾವುದೇ ಶಾಶ್ವತ ವ್ಯವಸ್ಥೆ ಇಲ್ಲ. ಅವರಿಗೆ ವಿವಿಧ ಸ್ಥಳಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಸತಿ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ” ಎಂದು ಹೇಳಿದರು.
ಲಕ್ನೋ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿಯೂಷ್ ಮೊರ್ಡಿಯಾ ಮಾತನಾಡಿ, ಅಯೋಧ್ಯೆಯಲ್ಲಿ 3,000 ಸಿಬ್ಬಂದಿಗಳ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಈ ಕ್ರಮವು ನಗರಕ್ಕೆ ಭೇಟಿ ನೀಡುವ ಸಮಯದಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ. ಮುಂದಿನ ಆರು ತಿಂಗಳ ಕಾಲ ಅಯೋಧ್ಯೆಯಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಬಿಗಿ ಕಟ್ಟೆಚ್ಚರ ವಹಿಸಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.