ನವದೆಹಲಿ: ಇದುವರೆಗೆ 30 ಕೋಟಿಗೂ ಹೆಚ್ಚು ಆಕಯುಷ್ಮಾನ್ ಕಾರ್ಡ್ಗಳನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಪ್ರೊ.ಎಸ್.ಪಿ.ಸಿಂಗ್ ಬಘೇಲ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ.
ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ವಿಶ್ವದ ಅತಿದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ಭರವಸೆ ಯೋಜನೆಯಾಗಿದ್ದು, ಪ್ರತಿ ಕುಟುಂಬಕ್ಕೆ ಪ್ರತಿ ವರ್ಷ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಯೋಜನೆಯ 55 ಕೋಟಿ ಫಲಾನುಭವಿಗಳು ಭಾರತದ ಜನಸಂಖ್ಯೆಯ 40 ಪ್ರತಿಶತದಷ್ಟಿದ್ದಾರೆ ಎಂದು ಅವರು ಹೇಳಿದರು. ಈ ಯೋಜನೆಯಡಿ 27,742 ಆಸ್ಪತ್ರೆಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.