ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಘೋಷಿಸಿದ್ದಾರೆ.
“ಶ್ರೀ ಎಲ್ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ವಿಷಯ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಹೇಳಿದ್ದಾರೆ.
“ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಿಂದ ಜೀವನ ಆರಂಭಿಸಿದ ಅವರು ಉಪ ಪ್ರಧಾನಿಯಾಗುವವರೆಗೆ ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದರು. ಅವರು ನಮ್ಮ ಗೃಹ ಸಚಿವರಾಗಿ ಗುರುತಿಸಿಕೊಂಡರು. I&B ಸಚಿವರು ಕೂಡ ಆದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ” ಎಂದು ಮೋದಿ ಹೇಳಿದ್ದಾರೆ.
I am very happy to share that Shri LK Advani Ji will be conferred the Bharat Ratna. I also spoke to him and congratulated him on being conferred this honour. One of the most respected statesmen of our times, his contribution to the development of India is monumental. His is a… pic.twitter.com/Ya78qjJbPK
— Narendra Modi (@narendramodi) February 3, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.