ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ, ಅರ್ಹತೆಯನ್ನು ಗುರುತಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತರತ್ನವನ್ನು ಪ್ರಕಟಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದು, ಇದಕ್ಕಾಗಿ ಮೋದಿಯವರು ಮತ್ತು ಅವರ ಸಂಪುಟದ ಸದಸ್ಯರಿಗೆ ಧನ್ಯವಾದಗಳು ಮತ್ತು ಅಡ್ವಾಣಿಯವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಅಡ್ವಾಣಿ ಅವರು ಭಾರತದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ಅವರು ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ನಡೆಯೂ ಆದರ್ಶಪ್ರಾಯವಾಗಿವೆ ಎಂದು ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.